ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದವನ ಬಂಧನ

24-kglphoto-3
Published on

ಕೊಳ್ಳೇಗಾಲ: ತಾಲೂಕಿನ ಸರಗೂರು ಗ್ರಾಮದ ಬಳಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಣೆ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ಶನಿವಾರ ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದು ಚಾಲಕನನ್ನು ಬಂಧಿಸಿದ್ದಾರೆ.

ತಿ.ನರಸೀಪುರ ತಾಲೂಕು ಪೂರಿಗಾಲಿ ಸಮೀಪದ ಸರಗೂರು ಗ್ರಾಮದ ಆಜ್ಗಾರ್ ಅಲಿ ಬಂಧಿತ. ಆರೋಪಿ ಗೂಡ್ಸ್ ವಾಹನದಲ್ಲಿದ್ದ ಸಾಗಿಸುತ್ತಿದ್ದ 1200 ಕೆ.ಜಿ ಅಕ್ಕಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯು ಕೊಳ್ಳೇಗಾಲದ ಸುತ್ತಮುತ್ತಲಿನ ಗ್ರಾಮಗಳಲ್ಲಿ ಕಡಿಮೆ ಬೆಲೆಗೆ ಪಡಿತರ ಅಕ್ಕಿಯನ್ನು ಖರೀದಿ ಮಾಡಿ ಬನ್ನೂರು ಕಡೆಗೆ ಸಾಗಣೆ ಮಾಡುತ್ತಿದ್ದ. ಈ ಖಚಿತ ಮಾಹಿತಿ ಮೇರೆಗೆ ಗ್ರಾಮಾಂತರ ಪೊಲೀಸ್ ಠಾಣೆ ಪಿಎಸ್‌ಐ ಸುಪ್ರೀತ್ ಹಾಗೂ ಆಹಾರ ಇಲಾಖೆ ನಿರೀಕ್ಷಕ ಪ್ರಸಾದ್ ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆ ದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net