ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಸಂದೇಶ ಹಾಕಿದಾತ ಬಂಧನ

arrested
Published on

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ವಾಟ್ಸಫ್ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ಫಾರ್ವರ್ಡ್ ಮಾಡಿದ್ದ ವಿಟ್ಲದ ಮೊಹಮ್ಮದ್ ಅನಾಸ್‌ನನ್ನು ಪೊಲೀಸರು ಪತ್ತೆ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ಮುಸ್ಲಿಮ್ ಯುವಸೇನೆ ಎಂಬ ವಾಟ್ಸಪ್ ಗ್ರೂಪ್ ನಲ್ಲಿ ಪ್ರಚೋದನಕಾರಿ ಸಂದೇಶವನ್ನು ವಾಟ್ಸ್ ಆಪ್ ಗ್ರೂಫ್ ನಲ್ಲಿ ಫಾರ್ವಡ್ ಮಾಡಿದ್ದ ಆಧಾರದಲ್ಲಿ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆಯ ಸಲುವಾಗಿ ಮಂಗಳೂರು ನಗರ ಸಿ.ಇ.ಎನ್ ಅಪರಾಧ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net