ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ ಬಂಧನ

2 vpt 4 nidin
ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ನಿಧಿನ್‌ನನ್ನು ಮಾಲು ಸಮೇತ ಬಂಧಿಸಿರುವುದು.
Published on

ವಿರಾಜಪೇಟೆ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಂಬಾಡಿ ಜಂಕ್ಷನ್ ಬಳಿ ಅಕ್ರಮವಾಗಿ ಗಾಂಜಾ ಸರಬರಾಜು, ಮಾರಾಟ ಮಾಡುತಿದ್ದವನನ್ನು ಪತ್ತೆ ಹಚ್ಚಿ ಶನಿವಾರ ಬಂಧಿಸುವಲ್ಲಿ ವಿರಾಜಪೇಟೆ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಪೆರಂಬಾಡಿ ಜಂಕ್ಷನ್ ಬಳಿ ಭಾನುವಾರ ಗಾಂಜಾ ಮಾರಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿ ಹಿನ್ನಲೆಯಲ್ಲಿ ದಾಳಿ ನಡೆಸಿದ ಪೋಲಿಸರು ಕೇರಳ ರಾಜ್ಯ ಕಣ್ಣೂರು ಜಿಲ್ಲೆಯ ನಿವಾಸಿ ನಿಧಿನ್ (28) ಬಂಧಿತ. ಈತನಿಂದ 3 ಕೆಜಿ 90 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಚರಣೆಯಲ್ಲಿ ವಿರಾಜಪೇಟೆ ಉಪವಿಭಾಗ ಡಿವೈಎಸ್‌ಪಿ ಮಹೇಶ್‌ಕುಮಾರ್, ವಿರಾಜಪೇಟೆ ವೃತ್ತ ನಿರೀಕ್ಷಕ ಅನೂಪ್ ಮಾದಪ್ಪ, ಪಿಎಸ್‌ಐ ಪ್ರಮೋದ್, ಸಿಬ್ಬಂದಿ ಭಾಗವಹಿಸಿದ್ದರು. ಪೊಲೀಸರ ಕಾರ್ಯವನ್ನು ಎಸ್ಪಿ ಕೆ.ರಾಮರಾಜನ್ ಶ್ಲಾಘಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net