

ಹುಬ್ಬಳ್ಳಿ: ಹುಬ್ಬಳ್ಳಿ-ವಿಜಯಪುರ ಹೆದ್ದಾರಿಯ ಶ್ರೀನಿವಾಸ ಗಾರ್ಡನ್ ಹತ್ತಿರ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದು, ಆತನಿಂದ 47,200 ರೂ. ಮೌಲ್ಯದ 472 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಸಮೀರ್ ಸೈಯದ್ ಬಾಷಾ ಬೆಟಗೇರಿ ಬಂಧಿತ. ಖಚಿತ ಮಾಹಿತಿ ಮೇರೆಗೆ ಸಿಇಎನ್ ಕ್ರೈಂ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.