ಹೆಂಡತಿ ಬಿಟ್ಟು ಅಪ್ರಾಪ್ತ ವಯಸ್ಕನ ಮೇಲೆ ಮೋಹಿತನಾದ ವ್ಯಕ್ತಿ; ಮುಂದೆ ನಡೆದಿದ್ದೇನು?

father Son
Published on

ಹನೂರು: ಹಂಡತಿ ಬಿಟ್ಟು ಹೋಗಿದ್ದ ವ್ಯಕ್ತಿಯೋರ್ವ ತನ್ನ ಕಾಮತೃಷೆಗಾಗಿ ಅಪ್ರಾಪ್ತ ವಯಸ್ಕ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿ ನಡೆದಿದೆ.

ಪ್ರಕರಣ ಸಂಬಂಧ ಹನೂರು ತಾಲ್ಲೂಕಿನ ರಾಮಾಪುರ ಪೊಲೀಸ್​ ಠಾಣಾ ವ್ಯಾಪ್ತಿಯ ನಿವಾಸಿಯಾದ ಅರುಣ್​ (31) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಆರೋಪಿ ಅರುಣ್​ ವೃತ್ತಿಯಲ್ಲಿ ಲಾರಿ ಚಾಲಕನಾಗಿದ್ದು, ಈತನಿಗೆ ಮದುವೆಯಾಗಿದ್ದು, ಪತ್ನಿ ಜೊತೆಗೆ ಇರದೆ ಬಿಟ್ಟು ಹೋಗಿದ್ದಾಳೆ. ಜೂನ್​ 29ರಂದು ಬಾಲಕ ಶಾಲೆ ಮುಗಿಸಿಕೊಂಡು ಮನೆಗೆ ಬಂದು ತನ್ನ ತಮ್ಮನ ಜೊತೆ ಆಟವಾಡುತ್ತಿದ್ದಾಗ ಆರೋಪಿಯು ಬಾಲಕನನ್ನು ತನ್ನ ಮನೆಗೆ ಹೊತ್ತೊಯ್ದು ದೌರ್ಜನ್ಯ ಎಸಗಿದ್ದಾನೆ.

ಬಳಿಕ ಈ ವಿಚಾರ ಬಾಲಕನ ತಾಯಿಗೆ ತಿಳಿದಿದ್ದು, ಅವರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ವೈದ್ಯಕೀಯ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net