ಗಾಂಜಾ ಸಾಗಿಸುತ್ತಿದ್ದವನ ಬಂಧನ

ಗಾಂಜಾ ಸಾಗಿಸುತ್ತಿದ್ದವನ ಬಂಧನ
Published on

ಯಳಂದೂರು: ತಾಲೂಕಿನ ವಡೆಗೆರೆ ಗ್ರಾಮದ ಆಂಜನೇಯ ದೇವಸ್ಥಾನ ಬಳಿಯ ರಸ್ತೆಯಲ್ಲಿ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಯಳಂದೂರು ಪೊಲೀಸರು ಬುಧವಾರ ಸಂಜೆ ಬಂಧಿಸಿದ್ದಾರೆ.

ತಾಲೂಕಿನ ಬಿಳಿಗಿರಿರಂಗನ ಬೆಟ್ಟದ ಸೀಗೆ ಬೆಟ್ಟದ ಪೋಡಿನ ನಿವಾಸಿ ಕುಮಾರ್ ಬಂಧಿತ ಆರೋಪಿ.

ಬೆಟ್ಟದಿಂದ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸಬ್‌ಇನ್‌ಸ್ಪ್ಪೆಕ್ಟರ್ ತಾಜಾಹುದ್ದೀನ್ ನೇತೃತ್ವದ ತಂಡ ದಾಳಿ ನಡೆಸಿ 138 ಗ್ರಾಂ ಒಣಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಸಿಬ್ಬಂದಿ ಜಡೆಸ್ವಾಮಿ, ಸಕೃನಾಯಕ, ನಾಗೇಂದ್ರ, ವಾಸುದೇವ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net