ಪತ್ನಿ ಕುತ್ತಿಗೆಗೆ ಚಾಕು ಇರಿದು ಕೊಲೆಗೈದ ಬಳಿಕ ತಾನೂ ಕುತ್ತಿಗೆಗೆ ಇರಿದುಕೊಂಡು ವ್ಯಕ್ತಿ ಆತ್ಮಹತ್ಯೆ

Murder
Published on

ಬಾಗಲಕೋಟೆ: ವ್ಯಕ್ತಿಯೊರ್ವ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮದಲ್ಲಿ ನಡೆದಿದೆ.

ಸುಜಾತಾ ಹಡಗಲಿ(30) ಕೊಲೆಯಾದ ಮಹಿಳೆ. ಯಲ್ಲಪ್ಪ ಹಡಗಲಿ (35) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೊದಲು ಪತ್ನಿ ಕುತ್ತಿಗೆಗೆ ಚಾಕು ಇರಿದು ಕೊಲೆಗೈದಿದ್ದಾನೆ. ಬಳಿಕ ತಾನೂ ಕುತ್ತಿಗೆಗೆ ಇರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನೆಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಆದರೆ, ಅಕ್ರಮ ಸಂಬಂಧ ಶಂಕೆಯೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಘಟನಾ ಸ್ಥಳಕ್ಕೆ ಹುನಗುಂದ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net