

ಚಿಕ್ಕಮಗಳೂರು: ಕಾಡುಪ್ರಾಣಿಗಳ ದಾಳಿಗೆ ಸಾಕುಪ್ರಾಣಿಗಳು ಬಲಿಯಾಗುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಂದು ಕಡೆ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬ ಬಲಿಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.
ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಊರಬಗೆ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ. ಅರ್ಜುನ್ (45) ಸಾವಿಗೀಡಾದ ವ್ಯಕ್ತಿ. ಈತ ತೋಟದಲ್ಲಿನ ಕೆಲಸ ಮುಗಿಸಿಕೊಂಡು ಮನೆಗೆ ಮರಳುತ್ತಿದ್ದಾಗ ಮಾರ್ಗಮಧ್ಯೆ ಕಾಡಾನೆ ದಾಳಿ ನಡೆಸಿದೆ.
ರಾಜ್ಯ ಹೆದ್ದಾರಿಯ ಸಮೀಪವೇ ಈ ಕಾರ್ಮಿಕನ ಮೇಲೆ ಕಾಡಾನೆ ದಾಳಿ ನಡೆದಿದೆ. ಈ ಭಾಗದಲ್ಲಿ ಇದೇ ತಿಂಗಳಲ್ಲಿ ಕಾಡಾನೆ ದಾಳಿಗೆ ಇದು ಎರಡನೇ ಬಲಿಯಾಗಿದದು, ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಅರಣ್ಯ ಇಲಾಖೆಯ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗೋಣಿಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.