ಮಾರುತಿ ವ್ಯಾನ್ ಡಿಕ್ಕಿ ಹೊಡೆದು ವ್ಯಕ್ತಿ ಸಾವು

Published on

ಸುಂಟಿಕೊಪ್ಪ: ಬಾಳೆಕಾಡು ತೋಟದ ಬಳಿಯಲ್ಲಿ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಮಾರುತಿ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬಾಳೆಕಾಡು ತೋಟದ ಕಾರ್ಮಿಕ ಬಾಬು (60) ಮೃತರು. ಇವರು ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ತೆರಳುತ್ತಿದ್ದ ಸಂದರ್ಭ ಮಾರುತಿ ಓಮ್ನಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಚಂದ್ರಶೇಖರ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ವಾಹನವನ್ನು ವಶಕ್ಕೆ ಪಡೆದು, ಚಾಲಕನ ವಿರುದ್ಧ ಕ್ರಮಕೈಗೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net