

ರಟ್ಟಿಹಳ್ಳಿ: ಖಾಸಗಿ ಬಸ್ನಿಂದ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಬುಳ್ಳಾಪುರ ಕ್ರಾಸ್ ಬಳಿ ಸೋಮವಾರ ನಡೆದಿದೆ.
ರಾಣೆಬೆನ್ನೂರ ತಾಲೂಕಿನ ಗುಡ್ಡದಹೊಸಳ್ಳಿ ಗ್ರಾಮದ ಬಸನಗೌಡ ಶಿವಪ್ಪ ಬೂದಿಹಾಳ (34) ಮೃತ ವ್ಯಕ್ತಿ.
ಈತ ಬಸ್ನ ಬಾಗಿಲ ಬಳಿ ನಿಂತು ಪ್ರಯಾಣ ಮಾಡುತ್ತಿದ್ದ ಸಮಯದಲ್ಲಿ ಬಸ್ನಿಂದ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.