ಪ್ಲಂಬಿಂಗ್ ಕೆಲಸ ಮಾಡುತ್ತಿದ್ದಾಗ ಬಿದ್ದು ವ್ಯಕ್ತಿ ಸಾವು

crime
Published on

ಹುಬ್ಬಳ್ಳಿ: ನಿರ್ಮಾಣ ಹಂತದ ಕಟ್ಟಡದಲ್ಲಿ ಪ್ಲಂಬಿಂಗ್ ಕೆಲಸ ಮಾಡುತ್ತಿದ್ದಾಗ ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಇಲ್ಲಿಯ ಕೆಎಂಸಿಆರ್‌ಐನಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ.

ಮೂಲತಃ ರಾಯಚೂರ ಜಿಲ್ಲೆಯ ನಿಜಾಮಿಟೌನ್ ನಿವಾಸಿ ಮಹ್ಮದಖಲಂದರ ಮೈನುದ್ದೀನ್ ಮುದುಗಲ್(21) ಮೃತರು. ರಾಜೀವನಗರದ 3ನೇ ಹಂತದ ಕಟ್ಟಡದಲ್ಲಿ 1ನೇ ಅಂತಸ್ತಿನಿಂದ ಕಾಲು ಜಾರಿ ಬಿದ್ದು ಕೆಎಂಸಿಆರ್‌ಐನಲ್ಲಿ ದಾಖಲಾಗಿದ್ದು, ಜೂ. 27ರಂದು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾನೆ. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net