

ವಿಜಯಪುರ: ಟಿಪ್ಪರ್ ಚಾಲಕನೊಬ್ಬನ ನಿರ್ಲಕ್ಷ್ಯದಿಂದಾಗಿ ಯುವಕನೊಬ್ಬ ಪ್ರಾಣ ಕಳೆದುಕೊಳ್ಳುವಂತಾಗಿದೆ. ವಿಜಯಪುರ ಜಿಲ್ಲೆ ಇಂಡಿ ರಸ್ತೆಯ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದ್ದು, ನಗರದ ನಿವಾಸಿ ರೆಹಮಾನ್ ಮೃತಪಟ್ಟಿದ್ದಾನೆ.
ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದಿದ್ದರಿಂದಾಗಿ ಟಿಪ್ಪರ್, ಯುವಕ ರೆಹಮಾನ್ಗೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಮುಂದಿನ ಚಕ್ರದಡಿ ಆತನ ದೇಹ ಸಿಲುಕಿಕೊಂಡಿದ್ದರಿಂದ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತವಾದ ಸ್ಥಳಕ್ಕೆ ಎಪಿಎಂಸಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಕೊಂಡಿದ್ದಾರೆ.