ಮಾ.೦೧ ರಿಂದ ಶ್ರೀ ರಾಘವೇಂದ್ರ ಗುರು ವೈಭವೋತ್ಸವ

RAYARU
RAYARU
Published on

ರಾಯಚೂರು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ ೦೧ ರಿಂದ ೦೫ರ ವರೆಗೆ ಶ್ರೀ ರಾಘವೇಂದ್ರ ಗುರು ವೈಭವೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶ್ರೀ ರಾಯರ ೪೦೪ನೇ ಪಟ್ಟಾಭಿಷೇಕ ಮಹೋತ್ಸವ ಹಾಗೂ ೪೩೦ನೇ ವರ್ಧಂತಿ ಉತ್ಸವದ ನಿಮಿತ್ತ ಹಮ್ಮಿಕೊಂಡಿರುವ ಕಾರ್ಯಕ್ರಮದ ಅಂಗವಾಗಿ ಪೀಠಾಽಪತಿ ಶ್ರೀ ಸುಬುಧೇಂದ್ರ ತೀರ್ಥರ ಸಾನ್ನಿಧ್ಯದಲ್ಲಿ ೦೬ ದಿನದವರೆಗೆ ವಿವಿಧ ಕಾರ್ಯಕ್ರಮಗಳು ಜರುಗಲಿವೆ.

ನಿತ್ಯ ಬೆಳಗ್ಗೆ ೧೦ ರಿಂದ ಗಂಟೆಯಿAದ ವಿದ್ವಾಂಸರಿAದ e್ಞÁನಯಜ್ಞ. ರಾತ್ರಿ ೭ಕ್ಕೆ ಸಂಜೆ ವಿವಿಧ ಸಂಗೀತಗಾರರಿAದ ಸಾಂಸ್ಕೃತಿಕ, ಧಾರ್ಮಿಕ, ಪೌರಾಣಿಕ ನಾಟಕ, ಭರತನಾಟ್ಯ ಕಾರ್ಯಕ್ರಮಗಳು ಜರುಗಲಿವೆ.

ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಿಂದ ಶ್ರೀ ರಾಯರಿಗೆ ಶೇಷವಸö ಸಮರ್ಪಣೆ ನಡೆಯಲಿದ್ದು. ಪೌರಾಣಿಕ ನಾಟಕ, ಭರತನಾಟ್ಯ ಕಾರ್ಯಕ್ರಮಗಳು ಜರುಗಲಿವೆ.

ಮಹೋತ್ಸª ನಿಮಿತ್ತ ಸಾಧಕರಿಗೆ ಕೊಡಲಾಗುವ ಶ್ರೀ ರಾಘವೇಂದ್ರ ಅನುಗ್ರಹ ಪ್ರಶಸ್ತಿಯನ್ನು ಈ ಬಾರಿ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ, ಕೇಂದ್ರದ ರಾಜ್ಯ ಖಾತೆ ಸಚಿವರಾದ ವಿ.ಸೋಮಣ್ಣ,ಕರಂದ್ಲಾಜೆ ಸೇರಿದಂತೆ ಅನೇಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದೆಂದು ಶ್ರೀಮಠ ಮ್ಯಾನೇಜರ್ ವೆಂಕಟೇಶ ಜ್ಯೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net