ಮೇಲ್ಛಾವಣಿಯಿಂದ ಬಿದ್ದು ಸಾವು

deadbody
Published on

ಬಂಟ್ವಾಳ: ಕೆಲಸ ಮಾಡುತ್ತಿದ್ದ ವೇಳೆ ಮನೆಯ ಮೇಲ್ಛಾವಣಿಯಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಮಂಚಿ ಚೌಕದ ಪಾಲು ರಾಜೇಶ್ (36) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಜೂನ್ 8ರಂದು ಅವರು ಪಕ್ಕದ ಮನೆಯವರ ಮಹಡಿ ಮೇಲೆ ಇಟ್ಟಿಗೆ ಕಟ್ಟುತ್ತಿದ್ದ ವೇಳೆ ಕಾಂಕ್ರಿಟ್ ಮೇಲ್ಛಾವಣಿಯಿಂದ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದರು. ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎರಡು ವರ್ಷಗಳ ಹಿಂದೆಯಷ್ಟೆ ರಾಜೇಶ್ ಮದುವೆಯಾಗಿದ್ದು, ಮನೆಯ ಆಧಾರಸ್ತಂಭವಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net