ಬೆಂಗಳೂರಿನ ಕ್ಷೌರದ ಅಂಗಡಿಯಲ್ಲಿ ಹೆಡ್‌ಮಸಾಜ್‌ ಮಾಡಿಸಿಕೊಂಡ ಯುವಕನಿಗೆ ಸ್ಟ್ರೋಕ್‌; ವೈದ್ಯರ ಸಲಹೆ ಏನು ಗೊತ್ತಾ?

barber shop
Published on

ಬೆಂಗಳೂರು:  ಕ್ಷೌರದ ಅಂಗಡಿಯಲ್ಲಿ (  barber shop ) ಕುತ್ತಿಗೆ ಭಾಗದ ಮಸಾಜ್ ಎಡವಟ್ಟಾಗಿ ಯುವಕನೊಬ್ಬ ಪಾರ್ಶ್ವವಾಯುವಿಗೆ ತುತ್ತಾಗಿ  ಚಿಕಿತ್ಸೆ ಪಡೆದು ಗುಣಮುಖನಾಗಿದ್ದಾನೆ. ಈತನಿಗೆ ಚಿಕಿತ್ಸೆ ನೀಡಿದ ವೈದ್ಯರು ಈ ಕುರಿತಾಗಿ ಖಾಸಗಿವಾಹಿನಿ ಜತೆಗೆ ಮಾತನಾಡಿ ಎಚ್ಚರಿಕೆ ನೀಡಿದ್ದಾರೆ.

ನಡೆದಿದ್ದೇನು?:

ಕ್ಷೌರಕ್ಕೆ ತೆರಳಿದ್ದಾಗ ತಲೆಭಾಗದ ಮಸಾಜ್ ಮಾಡಿಸಿಕೊಂಡಿದ್ದಾರೆ. ಈ ವೇಳೆ ಕ್ಷೌರಿಕ ಕುತ್ತಿಗೆಯನ್ನು ತಿರುಗಿಸಿದ ಕ್ಷಣ ನೋವುಂಟಾಗಿದೆ. ಆದರೆ, ಸರಿಹೋಗಬಹುದು ಎಂದುಕೊಂಡು ಮನೆಗೆ ವಾಪಸ್ಸಾಗಿದ್ದಾರೆ. ಆದರೆ, ಒಂದು ಗಂಟೆ ಅಂತರದಲ್ಲಿ ಮಾತನಾಡುವ ಹಾಗೂ ದೇಹದ ಎಡಭಾಗ ಸ್ವಾಧೀನ ಕಳೆದುಕೊಂಡ ಅನುಭವ ಉಂಟಾಗಿದೆ. ಇದರಿಂದ ಆತಂಕಗೊಂಡ ಆಸ್ಪತ್ರೆಗೆ ಹೋಗಿ ದಾಖಲಾಗಿದ್ದಾರೆ.

ಕುತ್ತಿಗೆಯನ್ನು ತಿರುಗಿಸಿದ ಪರಿಣಾಮ ಶೀರ್ಷ ಧಮನಿಯಲ್ಲಿ (ಕುತ್ತಿಗೆ ಭಾಗದ ನರ) ನೀರು ತುಂಬಿಕೊಂಡಿರುವುದು ಹಾಗೂ ಮೆದುಳಿನ ಪ್ರಾತಿನಿಧಿಕ ಚಿತ್ರ ಭಾಗಕ್ಕೆ ರಕ್ತ ಸಂಚಾರ ಕಡಿಮೆಯಾಗಿದ್ದರಿಂದ ಪಾರ್ಶ್ವವಾಯುವಿಗೆ ಕಾರಣ ಆಗಿರುವುದನ್ನು ದೃಢಪಡಿಸಿದ್ದಾರೆ.

ಈ ಬಗ್ಗೆ ಖಾಸಗಿವಾಹಿನಿ ಜತೆ ಮಾತನಾಡಿದ ಆ್ಯಸ್ಟರ್ ಆರ್.ವಿ ಆಸ್ಪತ್ರೆ ಹಿರಿಯ ನರರೋಗ ತಜ್ಞ ಡಾ| ಶ್ರೀಕಂಠ ಸ್ವಾಮಿ, ಸಾಧಾರಣ ಪಾರ್ಶ್ವವಾಯುವಿಗಿಂತ ಭಿನ್ನವಾದ ಸಮಸ್ಯೆಗೆ ತುತ್ತಾಗಿದ್ದರು. ಬಲವಂತವಾಗಿ ಕುತ್ತಿಗೆ ತಿರುಚಿದ ಕಾರಣ ಈ ಸಮಸ್ಯೆ ಉಂಟಾಗಿತ್ತು. ಕಲೇಶ್‌ಗೆ ರಕ್ತ ತೆಳುವಾಗಿಸುವ ಔಷಧಿಯನ್ನು ನೀಡಿ, ಪಾರ್ಶ್ವವಾಯು ಇನ್ನಷ್ಟು ಹೆಚ್ಚಾಗದಂತೆ ಚಿಕಿತ್ಸೆ ನೀಡಲಾಯಿತು. ಅವರು ಊರಿಗೆ ತೆರಳಿ ಚಿಕಿತ್ಸೆ ಪಡೆದ ಬಳಿಕವೇ ಚೇತರಿಸಿಕೊಂಡಿದ್ದಾರೆ ಎಂದು ಹೇಳಿದರು.

ಸೂಕ್ತ ತರಬೇತಿ ಇಲ್ಲದ, ವೃತಿಪರ ಅಲ್ಲದವರಿಂದ ಮಸಾಜ್ ಮಾಡಿಸಿಕೊಳ್ಳುವ ಬಗ್ಗೆ ಎಚ್ಚರಿಕೆ ವಹಿಸುವಂತೆ ವೈದ್ಯರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net