ಕೊಳ್ಳೇಗಾಲ: ಕಾರು ಬೈಕ್ ನಡುವೆ ಅಪಘಾತ ಸಂಭವಿಸಿ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ.
ತಾಲೂಕಿನ ಉಗನೀಯ ಗ್ರಾಮದ ಮಹಾದೇವಪ್ಪ (54) ಮೃತಪಟ್ಟವರು. ಕಳೆದ ಜ.15 ರಂದು ನರೀಪುರ ಜಂಕ್ಷನ್ ಬಳಿ ಟಿವಿಎಸ್ ಎಕ್ಸೆಲ್ ಹಾಗೂ ಮಾರುತಿ ಕಾರು ನಡುವೆ ಅಪಘಾತವಾಗಿ ತೀವ್ರವಾಗಿ ಗಾಯಗೊಂಡಿದ್ದ ಮಹಾದೇವಪ್ಪ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.