

ಬೆಂಗಳೂರು: ಲೋಕಾಯುಕ್ತ ಕಚೇರಿಗೆ ಆಗಮಿಸಿದ ತೇಜರಾಜ ಶರ್ಮಾ ಒಂದೂವರೆ ನಿಮಿಷದಲ್ಲಿ ನನಗೆ 11 ಬಾರಿ ಚೂರಿ ಇರಿದ ಎಂದು ಲೋಕಾಯುಕ್ತ ನ್ಯಾ. ಪಿ.ವಿಶ್ವನಾಥ ಶೆಟ್ಟಿ ಕೋರ್ಟ್ ವಿಚಾರಣೆ ವೇಳೆ ಹೇಳಿಕೆ ಕೊಟ್ಟಿದ್ದಾರೆ.
ಆರೋಪಿ ತೇಜರಾಜ ಶರ್ಮಾ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ 56ನೇ ಸೆಷನ್ಸ್ ನ್ಯಾಯಾಲಯದಲ್ಲಿ ಶನಿವಾರ ವಿಚಾರಣೆ ನಡೆಯಿತು. ಬೆಳಗ್ಗೆ ನ್ಯಾಯಾಲಯಕ್ಕೆ ಬಂದ ವಿಶ್ವನಾಥ ಶೆಟ್ಟಿ ಪ್ರಕರಣದ ಬಗ್ಗೆ ಒಂದೂವರೆ ಗಂಟೆ ಮಾಹಿತಿ ನೀಡಿದರು. ತೇಜರಾಜ ಶರ್ಮಾ ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾನ್ಪರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದ ಲೋಕಾಯುಕ್ತರ ಹೇಳಿಕೆ ಪಡೆದುಕೊಂಡ ನ್ಯಾಯಾಲಯ ಪ್ರಕರಣದ ವಿಚಾರಣೆಯನ್ನು ಫೆ.20ಕ್ಕೆ ಮುಂದೂಡಿತು.