ಮಗಳು ಮತ್ತು ಆಕೆಯ ಪ್ರಿಯಕರನನ್ನು ಕಲ್ಲಿನಿಂದ ಜಜ್ಜಿ ಕೊಂದ ಅಪ್ಪ!

murder
Published on

ವಿಜಯಪುರ: ಬಸವನಾಡು ವಿಜಯಪುರ ಜಿಲ್ಲೆಯಲ್ಲಿ ಮರ್ಯಾದೆ ಹತ್ಯೆಯಾಗಿರುವ ಸಂಶಯ ಮೂಡಿದೆ. ಸಮಾನತೆ ಸಂದೇಶ ಸಾರಿದ ವಿಶ್ವಗುರು ಬಸವಣ್ಣನ ನಾಡಿನಲ್ಲಿ ಘನಘೋರ ಘಟನೆ ನಡೆದಿದೆ. ಯುವಕ ಹಾಗೂ ಅಪ್ರಾಪ್ತೆಯಾಗಿದ್ದ ಪ್ರೇಮಿಗಳಿಬ್ಬರ ಡಬಲ್‌ ಮರ್ಡರ್ ಆಗಿರುವ ಘಟನೆ ದೇವರ ಹಿಪ್ಪರಗಿ ತಾಲೂಕಿನ ಸಲಾದಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಬಸವರಾಜ ಬಡಿಗೇರಿ(19) ಹಾಗೂ ಖಾನಾಪುರ ಗ್ರಾಮದ 16ರ್ಷದ ಅಪ್ರಾಪ್ತ ಬಾಲಕಿಯ ಕೊಲೆ ಮಾಡಲಾಗಿದೆ. ಬಸವರಾಜ ಹಾಗೂ ಅಪ್ರಾಪ್ತೆ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಅನ್ಯ ಕೋಮಿನವರಾಗಿದ್ದರಿಂದ ಅಪ್ರಾಪ್ತೆ ಮನೆಯಲ್ಲಿ ವಿರೋಧವಿತ್ತು. ಇಂದು ಮದ್ಯಾಹ್ನ ಇಬ್ಬರೂ ಸೇರಿದ್ದ ಸಮಯದಲ್ಲಿ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲಾಗಿದೆ. ಅಪ್ರಾಪ್ತೆಯ ತಂದೆಯಿಂದಲೇ ಕೊಲೆ ನಡೆದಿದೆ. ಅನ್ಯ ಕೋಮಿನ ಯುವಕನೊಂದಿಗೆ ಮಗಳು ಇರುವುದನ್ನು ಕಂಡು ಕೆಂಡಾಮಂಡಲವಾದ ತಂದೆಯಿಂದಲೇ ಹತ್ಯೆಯಾಗಿದೆ.

ಸಲಾದಹಳ್ಳಿ ಹಾಗೂ ಖಾನಾಪುರ ಅಕ್ಕಪಕ್ಕದ ಗ್ರಾಮಗಳಾಗಿದ್ದರಿಂದ ಇಬ್ಬರಿಗೂ ಪರಿಚಯವಾಗಿತ್ತು, ಇದೇ ಪರಿಚಯ ಪರಸ್ಪರ ಪ್ರೀತಿಗೆ ತಿರುಗಿತ್ತು ಎನ್ನಲಾಗಿದೆ. ಕಲಕೇರಿ ಪೊಲೀಸ್ ಠಾಣೆ ವ್ಯಾಪ್ತಿ ಘಟನೆ ನಡೆದಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net