ಸೊಸೆ ಜೊತೆ ಬೈಕ್​ನಲ್ಲಿ ತೆರಳುತ್ತಿದ್ದ ಮಾವ ಸಾವು; ಸಾವಿಗೆ ಕಾರಣನಾದವ ಪರಾರಿ..

Gangayya
Published on

ಬೆಂಗಳೂರು: ವ್ಯಕ್ತಿಯೊಬ್ಬರು ಸೊಸೆಯೊಂದಿಗೆ ಬೈಕ್​ನಲ್ಲಿ ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸೊಸೆ ಗಾಯಗೊಂಡಿದ್ದಾರೆ. ಬೆಂಗಳೂರು ಹೊರವಲಯದ 8ನೇ ಮೈಲಿಯ ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ.

ನೆಲಮಂಗಲದ ಗಂಗಯ್ಯ (65) ಮೃತಪಟ್ಟವರು. ಸೊಸೆ ವಿಜಯಲಕ್ಷ್ಮಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗಯ್ಯ ಅವರು ಸೊಸೆ ಜತೆ ಬೈಕ್​ನಲ್ಲಿ ಹೋಗುತ್ತಿದ್ದಾಗ ಟ್ಯಾಂಕರ್​​ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಗಯ್ಯ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಅಪಘಾತದಿಂದ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾಗಿದ್ದನ್ನು ನೋಡುತ್ತಿದ್ದಂತೆ ಟ್ಯಾಂಕರ್​ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೀಣ್ಯ ಸಂಚಾರ ಠಾಣೆ ಪೊಲೀಸರು ಧಾವಿಸಿ ಮೃತದೇಹ ತೆರವುಗೊಳಿಸಿದ್ದಾರೆ. ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net