ಹಂಪಾಪಟ್ಟಣ: ಅನುಮಾನಸ್ಪಾದವಾಗಿ ವ್ಯಕ್ತಿ ಸಾವು, ಕೊಲೆ ಶಂಕೆ

IMG_20221103_131906.jpg
Published on

ಹಗರಿಬೊಮ್ಮನಹಳ್ಳಿ: ತಾಲೂಕಿನ ಹಂಪಾಪಟ್ಟಣದ ನಿವಾಸಿ ಸೊಪ್ಪಿನವರ ಚೌಡಪ್ಪ(42) ಅನುಮಾನಸ್ಪಾದವಾಗಿ ಸಾವನ್ನಪ್ಪಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ‌.
ವರದಾಪುರದಿಂದ ಹಂಪಾಪಟ್ಟಣಕ್ಕೆ ತೆರಳುವ ರಸ್ತೆಯಲ್ಲಿ ಗುರುವಾರ ಮೃತದೇಹ ಪತ್ತೆಯಾಗಿದೆ. ತಲೆಗೆ ತೀವ್ರಪೆಟ್ಟು ಬಿದ್ದಿರುವುದು ಕಂಡು ಬಂದಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕೊಲೆ ಮಾಡಿ ಬಿಸಾಡಿರುವ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಹಗರಿಬೊಮ್ಮನಹಳ್ಳಿ ಠಾಣೆ ಸಿಪಿಐ ಟಿ.ಮಂಜಣ್ಣ, ಪಿಎಸ್ಐ ಪಿ.ಸರಳಾ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net