ಸಿನಿಮಿಯ ರೀತಿಯಲ್ಲಿ ಪ್ರೇಮಿಗಳ ಬೈಕ್ ಸವಾರಿ! ಇಂಥ ರೊಮ್ಯಾನ್ಸ್​ ಬೇಕಾ? ನೆಟ್ಟಿಗರು ಕಿಡಿ

WhatsApp-Image-2024-05-19-at-5.21.53-PM
Published on

ಬೆಂಗಳೂರು: ಫ್ಲೈಓವರ್ ಮೇಲೆ ವ್ಯಕ್ತಿಯೊಬ್ಬ ಯುವತಿಯನ್ನು ತನ್ನ ತೊಡೆಯ ಮೇಲೆ ಕೂರಿಸಿಕೊಂಡು ಅಪಾಯಕಾರಿಯಾಗಿ ಬೈಕ್ ಚಲಾಯಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದ್ದು, ಈ ದೃಶ್ಯ ನೋಡಿದ ನೆಟ್ಟಿಗರು, ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಪ್ರೇಮಿಗಳ ಹುಚ್ಚಾಟದ ವಿಡಿಯೋ ಬೆಂಗಳೂರು ಸಂಚಾರಿ ಪೊಲೀಸರ ಗಮನಕ್ಕೆ ಬಂದಿದ್ದು, ಸದ್ಯ ಇಬ್ಬರನ್ನೂ ಅಧಿಕಾರಿಗಳು ಇದೀಗ ಪತ್ತೆ ಹಚ್ಚಿದ್ದಾರೆ.

ಈ ಘಟನೆ ಯಾವ ದಿನ ನಡೆದಿದ್ದು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ವಿಡಿಯೋ ವೈರಲ್ ಆದ ಬಳಿಕ ಪೊಲೀಸರ ಗಮನಕ್ಕೆ ಬಂದಿದೆ ಎನ್ನಲಾಗಿದೆ. ಯುವತಿ ಬೈಕ್ ಚಲಾಯಿಸುತ್ತಿರುವ ಯುವಕನ ತೊಡೆಯ ಮೇಲೆ ಕುಳಿತು ಸವಾರಿ ಮಾಡುತ್ತಿರುವುದು ದೃಶ್ಯದಲ್ಲಿ ಕಂಡುಬಂದಿದೆ. ಘಟನೆ ಉತ್ತರ ಬೆಂಗಳೂರಿನ ಹೆಬ್ಬಾಳದ ಮೇಲ್ಸೇತುವೆ ಮೇಲೆ ನಡೆದಿದೆ ಎಂದು ವರದಿಯಾಗಿದೆ.

ಬೆಂಗಳೂರು ಸಂಚಾರಿ ಪೊಲೀಸರು ಬೈಕ್‌ನ ನಂಬರ್ ಪ್ಲೇಟ್ ಮತ್ತು ಸಿಸಿಟಿವಿ ದೃಶ್ಯಗಳನ್ನು ಬಳಸಿ ಯುವಕ ಮತ್ತು ಯುವತಿಯನ್ನು ಪತ್ತೆ ಮಾಡಿದ್ದಾರೆ. ಈಗ ಅವರಿಬ್ಬರನ್ನು ಪತ್ತೆ ಮಾಡಿದ್ದೇವೆ. ಈ ಹಿಂದೆ ಮಾಡಿದ ಉಲ್ಲಂಘನೆಗಳ ಪಟ್ಟಿಯನ್ನು ಸಹ ನಾವು ಪತ್ತೆಹಚ್ಚಿದ್ದೇವೆ ಎಂದು ಬೆಂಗಳೂರಿನ ಸಂಚಾರ ಉತ್ತರ ವಿಭಾಗದ ಡಿಸಿಪಿ ಮಾಹಿತಿ ಹಂಚಿಕೊಂಡಿದ್ದಾರೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net