

ವಿಜಯವಾಣಿ ಸುದ್ದಿಜಾಲ ಧಾರವಾಡ
ನಗರದ ಯುನಿಸೆಕ್ಸ್ ಸಲೂನ್ ಬ್ಯೂಟಿ ಪಾರ್ಲರ್‌ವೊಂದರಲ್ಲಿ ಹೇರ್ ಸೆಟ್ಟಿಂಗ್‌ಗೆ ಹೋಗಿದ್ದ ಮಹಿಳೆಗೆ ದೌರ್ಜನ್ಯ ಎಸಗಿದ್ದ ಆರೋಪಿಗೆ 3ನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯ 15 ತಿಂಗಳು ಸಾದಾ ಜೈಲು ಶಿಕ್ಷೆ ಮತ್ತು 5,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ.
ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಚಂಡೀಗಢದ ಸೋನು ಮಹಮೂದ್ ಎಂಬಾತ ಜೈಲುಶಿಕ್ಷೆಗೆ ಗುರಿಯಾದ ವ್ಯಕ್ತಿ. ನಗರದ ವಿದ್ಯಾಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಯುನಿಸೆಕ್ಸ್ ಸಲೂನ್ ಬ್ಯೂಟಿ ಪಾರ್ಲರ್‌ನಲ್ಲಿ 2017ರಲ್ಲಿ ಈ ಘಟನೆ ನಡೆದಿತ್ತು. ಈ ಕುರಿತು ನೊಂದ ಮಹಿಳೆ ವಿದ್ಯಾಗಿರಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಅಂದಿನ ಎಎಸ್‌ಐ ರಾಜೇಸಾಬ ಕೆರೂರ ತನಿಖೆ ಮಾಡಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. 3ನೇ ಹೆಚ್ಚುವರಿ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಅಲ್ಲಪ್ಪ ಎಂ. ಬಡಿಗೇರ ಅವರು ಸಾಕ್ಷಿ ವಿಚಾರಣೆ ಮಾಡಿ, ಆರೋಪಿಯನ್ನು ತಪ್ಪಿತಸ್ಥನೆಂದು ಪರಿಗಣಿಸಿ ಶಿಕ್ಷೆ ವಿಽಸಿದ್ದಾರೆ. ಹಿರಿಯ ಸಹಾಯಕ ಸರ್ಕಾರಿ ವಕೀಲ ಅನಿಲಕುಮಾರ ರಮೇಶಚಂದ್ರ ತೊರವಿ ಸರ್ಕಾರದ ಪರ ವಕಾಲತ್ತು ಮಂಡಿಸಿದ್ದರು.