ಆಂಧ್ರದಿಂದ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಗೆ 10 ವರ್ಷ ಜೈಲು

dist Court building
ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
Published on

ಶಿವಮೊಗ್ಗ: ನೆರೆಯ ಆಂಧ್ರಪ್ರದೇಶದ ರಾಜಮಂಡ್ರಿಯಿಂದ ಶಿವಮೊಗ್ಗಕ್ಕೆ ಓಮ್ನಿಯಲ್ಲಿ 50.430 ಕೆಜಿ ಒಣ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂ. ದಂಡ ವಿಧಿಸಿದೆ. ದಂಡ ಪಾವತಿಸಲು ತಪ್ಪಿದ್ದಲ್ಲಿ ಎರಡು ವರ್ಷ ಹೆಚ್ಚುವರಿ ಸಾಧಾ ಸಜೆ ನೀಡಿ ಆದೇಶಿಸಿದೆ.

ಭದ್ರಾವತಿ ತಾಲೂಕಿನ ಕಲ್ಲಹಳ್ಳಿ ಗ್ರಾಮದ ಎಲ್.ಮುರುಗ(34) ಜೈಲು ಶಿಕ್ಷೆಗೆ ಒಳಗಾದವ. ಈತ 2021ರಲ್ಲಿ ಆಂಧ್ರದ ರಾಜಮಂಡ್ರಿಯಿಂದ ಓಮ್ನಿ ಮೂಲಕ ಅಕ್ರಮವಾಗಿ ಒಣ ಗಾಂಜಾ ಸಾಗಿಸುತ್ತಿದ್ದ. ಈ ವೇಳೆ ಸೊರಬ ವಲಯ ಅಬಕಾರಿ ನಿರೀಕ್ಷಕರ ತಂಡ ಮುರುಗನನ್ನು ಬಂಧಿಸಿತ್ತು. ಪ್ರಕರಣ ದಾಖಲಿಸಿಕೊಂಡು ಎನ್‌ಡಿಪಿಎಸ್‌ನಡಿ ಮುರುಗನ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು.

ಪ್ರಕರಣ ವಿಚಾರಣೆ ನಡೆಸಿ ಆರೋಪಗಳು ದೃಢಪಟ್ಟಿದ್ದರಿಂದ ನ್ಯಾಯಾಧೀಶ ಮಂಜುನಾಥ ನಾಯಕ್ ಅವರು ಕಠಿಣ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿದ್ದಾರೆ. ಸರ್ಕಾರಿ ಅಭಿಯೋಜಕ ಎ.ಎಂ.ಸುರೇಶ್‌ಕುಮಾರ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net