ಮೀನು ಹಿಡಿಯಲು ಹೋದ ವ್ಯಕ್ತಿ ಕೆರೆಯಲ್ಲಿ ಮುಳಗಿ ಸಾವು

Crime Logo
Published on

ಹಾನಗಲ್ಲ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ನೀರಿನಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ಹಿರೇಕೆರೆಯ ಕಾಲುವೆಯಲ್ಲಿ ಸೋಮವಾರ ನಡೆದಿದೆ.

ತಾಲೂಕಿನ ನರೇಗಲ್ಲ ಗ್ರಾಮದ ನಾಗಪ್ಪ ನಿಂಗಪ್ಪ ಕರಡಿ (58) ಮೃತ ವ್ಯಕ್ತಿ.

ಈತ ಮೀನು ಹಿಡಿಯುವ ಸಲುವಾಗಿ ಕೆರೆ ಹತ್ತಿರ ಹೋದಾಗ ಕೆರೆಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net