

ರಾಯಚೂರು ಮಡಿವಾಳ ಸಮಾಜದಿಂದ ಶ್ರಾವಣ ಮಾಸದ ನಿಮಿತ್ತ ಮನ ಮನೆಗೆ ಮಾಚಿದೇವ ಎಂಬ ವಿಶೇಷ ಕಾರ್ಯಕ್ರಮವನ್ನು ಜು.27ರಿಂದ ಆಗಸ್ಟ್ 27 ರವರೆಗೆ ರಾಜ್ಯಾಧ್ಯಂತ ಹಮ್ಮಿಕೊಳ್ಳಲಾಗಿದೆಂದು ಸಮಾಜದ ಜಿಲ್ಲಾಧ್ಯಕ್ಷ ಜಂಬಣ್ಣ ಯಕ್ಲಾಪುರ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚಿತ್ರದುರ್ಗದ ಜಗದ್ಗುರು ಶ್ರೀ ಮಾಚಿದೇವ ಮಹಾ ಸಂಸ್ಥಾನಮಠ (ಮಡಿವಾಳ ಗುರುಪೀಠ)ದ ಡಾ. ಬಸವ ಮಾಚಿದೇವ ಸ್ವಾಮೀಜಿ ಸಾನಿದ್ಯದಲ್ಲಿ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಜು.31 ರಂದು ನಗರದ ಮಡಿವಾಳ ಮಾಚಿದೇವ ಸಮುದಾಯ ಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಮುದಾಯದ ಜನರಲ್ಲಿ ಸಂಘಟನೆಯ ಮಹತ್ವ, ಶರಣ ಮಾಚಿದೇವರ ಆದರ್ಶ, ತತ್ವಗಳ ಬಗ್ಗೆ ಜನರಲ್ಲಿ ಜಾಗ್ರತೆ ಮೂಡಿಸುವ ಉದ್ದೇಶದಿಂದ ಡಾ. ಬಸವ ಮಾಚಿದೇವ ಸ್ವಾಮೀಜಿಯವರು ಕಾರ್ಯಕ್ರಮವನ್ನು ಕೈಗೊಂಡಿದ್ದಾರೆ. ಈಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಯು.ಮಲ್ಲೇಶ್ , ನರಸಪ್ಪ , ಹುಸೇನಪ್ಪ , ಬಿಎಲ್ ವೆಂಕಟೇಶ್, ಎಚ್.ಮುನಿಸ್ವಾಮಿ , ಎ.ಶಾಂತಕುಮಾರ್ ಇದ್ದರು.