ಮೇವಿನ ಕೊರತೆಯಾಗದಂತೆ ನಿರ್ವಹಣೆ ಮಾಡಿ

16
Published on

ಮೈಸೂರು: ಸರ್ಕಾರದ ಬರ ಪರಿಹಾರ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಲಹೆ ನೀಡಿದರು.


ನಗರದ ಅತಿಥಿಗೃಹ ಆವರಣದಲ್ಲಿ ಸೋಮವಾರ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವತಿಯಿಂದ ಸಾಂಕೇತಿಕವಾಗಿ ರೈತರಿಗೆ ಮೇವಿನ ಬೀಜದ ಕಿರು ಪೊಟ್ಟಣಗಳನ್ನು ವಿತರಿಸಿ ಮಾತನಾಡಿದರು.

ಸರ್ಕಾರದಿಂದ ಉಚಿತವಾಗಿ ವಿತರಿಸುತ್ತಿರುವ ಮೇವಿನ ಬೀಜದ ಕಿರು ಪೊಟ್ಟಣಗಳಿಂದ ರೈತರು ಮೇವನ್ನು ಬೆಳೆದು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ನಿರ್ವಹಿಸಲು ಸಲಹೆ ನೀಡಿದರು.

ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಡಾ.ನಾಗರಾಜು, ಸಹಾಯಕ ನಿರ್ದೇಶಕ ಡಾ.ಎಂ.ಪಿ.ಪೂರ್ಣಾನಂದ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net