ಮಣ್ಣು ಅಗೆತ ಕಾಮಗಾರಿ ಮಾಡದಂತೆ ಮನಪಾ ಸೂಚನೆ

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Published on
ಮಂಗಳೂರು : ಮುಂಗಾರು ಮಳೆಗಾಲ ಪ್ರಾರಂಭವಾಗಲಿರುವುದರಿಂದ ಮಣ್ಣು ಕುಸಿತ, ಗುಡ್ಡ ಕುಸಿತ, ಸಾರ್ವಜನಿಕ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿಯಾಗುವುದನ್ನು ತಡೆಗಟ್ಟಲು ಮಂಗಳೂರು ನಗರದಲ್ಲಿ ಜೂ.1ರಿಂದ ಸೆ. 30ರವರೆಗೆ ಯಾವುದೇ ರೀತಿಯ ರಸ್ತೆ ಅಗೆತ, ಗುಡ್ಡ ಅಗೆತ ಹಾಗೂ ಮಣ್ಣು ಅಗೆತದ ಕಾಮಗಾರಿಯನ್ನು ಮಾಡದಂತೆ ಸೂಚಿಸಲಾಗಿದೆ.
ಈ ಅವಧಿಯಲ್ಲಿ ಮಣ್ಣು ಸಾಗಾಟ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈಗಾಗಲೇ ಪಾಲಿಕೆಯಿಂದ ಪರವಾನಿಗೆ ಪಡೆದು ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಿದ್ದರೆ ಕಾಮಗಾರಿಯ ಸ್ಥಳದಲ್ಲಿ ಅಕ್ಕಪಕ್ಕದ ಆಸ್ತಿಗಳಿಗೆ ಹಾನಿಯಾಗದ ರೀತಿಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮವಹಿಸಿ ಜರೂರಾಗಿ ಬ್ಯಾಕ್ ಫಿಲ್ಲಿಂಗ್ ಕಾಮಗಾರಿಯನ್ನು ನಿರ್ವಹಿಸಬೇಕು. ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕು.
ಯಾವುದಾದರೂ ಅನಾಹುತ ಸಂಭವಿಸಿ ಆಸ್ತಿಪಾಸ್ತಿಗಳಿಗೆ ಹಾನಿ ಅಥವಾ ಪ್ರಾಣ ಹಾನಿಯಾದರೆ ಮಾಲೀಕರು ಹಾಗೂ ಸಂಬಂಧಪಟ್ಟ ಇಂಜಿನಿಯರ್‌ರವರನ್ನು ನೇರ ಜವಾಬ್ದಾರರನ್ನಾಗಿ ಮಾಡಲಾಗುತ್ತದೆ ಎಂದು ಮಹಾ ನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net