

ಮೈಸೂರು: ಮೈಸೂರು ವಿವಿ ಮಾನಸ ಗಂಗೋತ್ರಿ ಕ್ಯಾಂಪಸ್ ತಂಡ 2023-24ನೇ ಶೈಕ್ಷಣಿಕ ಸಾಲಿನ ಮೈಸೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ‘ಸಾಹಿತ್ಯಕ ಮತ್ತು ಸಾಂಸ್ಕೃತಿಕ ಸ್ಪರ್ಧೆ’ಯಲ್ಲಿ ‘ಸಮಗ್ರ ಪಾರಿತೋಷಕ’ ಪ್ರಶಸ್ತಿ ಪಡೆಯಿತು.
ಮೈಸೂರು ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ವತಿಯಿಂದ ಮಾನಸಗಂಗೋತ್ರಿಯ ಇಎಂಎಂಆರ್‌ಸಿ ಸಭಾಂಗಣದಲ್ಲಿ ಬುಧವಾರ ಮುಕ್ತಾಯಗೊಂಡ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿತು. ಯುವರಾಜ ಕಾಲೇಜು ತಂಡ ದ್ವಿತೀಯ ಹಾಗೂ ಕಾವ ಕಾಲೇಜು ತಂಡ ತೃತೀಯ ಸ್ಥಾನ ಪಡೆಯಿತು.
ಕುಲಸಚಿವ ಪ್ರೊ.ಎಂ.ಮಹದೇವನ್ ಟ್ರೂಫಿ ವಿತರಿಸಿದರು. ಹಣಕಾಸು ಅಧಿಕಾರಿ ಕೆ.ಎಸ್.ರೇಖಾ, ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯದ ನಿರ್ದೇಶಕ ಪ್ರೊ.ಬಿ.ಎಸ್.ಚಂದ್ರಶೇಖರ, ಸಹಾಯಕ ನಿರ್ದೇಶಕಿ ಡಾ.ಎಸ್.ಎನ್.ಸುಷ್ಮಾ ಇದ್ದರು.