ರಸ್ತೆಗೆ ನಾಮಫಲಕ ಅಳವಡಿಸಲು ಆಗ್ರಹ: ಡಿಸಿಗೆ ದಲಿತ ಮುಖಂಡರಿಂದ ಮನವಿ ಸಲ್ಲಿಕೆ

1 (6)
Published on

ಮಂಡ್ಯ: ನಗರದ ಹೃದಯ ಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಗೆ ನಾಮಫಲಕ ಅಳವಡಿಸುವಂತೆ ದಲಿತ ಮುಖಂಡರು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಹಿಂದೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಅಂಬೇಡ್ಕರ್ ವೃತ್ತದಿಂದ ಡಾ.ಬೆಸಗರಹಳ್ಳಿ ರಾಮಣ್ಣ ವೃತ್ತದವರೆಗೆ ಡಾ.ಬಿ.ಆರ್.ಅಂಬೇಡ್ಕರ್ ಜೋಡಿ ರಸ್ತೆ ಎಂದು ನಾಮಕರಣ ಮಾಡಲು ಸರ್ವಾನುಮತದ ನಿರ್ಣಯ ಮಾಡಲಾಗಿತ್ತು. ಅದರಂತೆ ತುರ್ತು ಕ್ರಮ ವಹಿಸಬೇಕು. ರಸ್ತೆಯ ನಾಲ್ಕು ಪ್ರಮುಖ ವೃತ್ತಗಳಲ್ಲಿ ನಾಮಫಲಕ ಅಳವಡಿಸಬೇಕು. ರಸ್ತೆಯಲ್ಲಿರುವ ಅಂಗಡಿಗಳ ಪರವಾನಗಿ ನವೀಕರಣ ಸಂದರ್ಭದಲ್ಲಿ ಅಂಬೇಡ್ಕರ್ ರಸ್ತೆ ಎಂದು ಕಡ್ಡಾಯವಾಗಿ ನಮೂದಿಸುವಂತೆ ಆಗ್ರಹಿಸಿದರು.

ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ರಘುನಂದನ್, ಮುಖಂಡರಾದ ವೆಂಕಟಗಿರಿಯಯ್ಯ, ಎಂ.ಎಲ್.ತುಳಸೀಧರ್, ಎಂ.ಎಸ್.ಮೂರ್ತಿ, ಎಂ.ವಿ.ಕೃಷ್ಣ, ರಮಾನಂದ ತರೀಕೆರೆ ಕಾಲೋನಿ, ಗುರುಮೂರ್ತಿ, ಲಕ್ಷ್ಮಣ್ ಚೀರನಹಳ್ಳಿ, ಬಾಲರಾಜ್, ಲಕ್ಷ್ಮೀಕಾಂತ್, ದಿನೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net