ಕುಶಾಲನಗರದಲ್ಲಿ ಅಯ್ಯಪ್ಪ ಮಂಡಲೋತ್ಸವ

Mandalotsava
Published on

ಕುಶಾಲನಗರ:

ಕುಶಾಲನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ವತಿಯಿಂದ ಸೋಮವಾರ ಕಾವೇರಿ ನದಿ ತೀರದ ಪುಣ್ಯಧಾಮದಲ್ಲಿ ಸ್ಥಾಪನೆಯಾಗಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಮಂಡಲ ಪೂಜೋತ್ಸವ ನಡೆಯಿತು. ಅರ್ಚ ಕೃಷ್ಣಮೂರ್ತಿ ಭಟ್ ಮತ್ತು ಇತರ ಆರ್ಚಕರು ನವಕ ಹೋಮ, ಶಾಸ್ತಾ ಪೂಜೆ, ಅಭಿಷೇಕ ಪೂಜೆ, ನೈವೇದ್ಯ, ಮಹಾಮಂಗಳಾರಾತಿ ನೆರವೇರಿಸಿದರು. ನಂತರ ಸೇರಿದ್ದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ನಡೆಯಿತು.

ಮಧ್ಯಾಹ್ನ 3 ಗಂಟೆಗೆ ನೂರಾರು ಅಯ್ಯಪ್ಪ ಮಾಲಾಧಾರಿಗಳು ಗುರು ಸ್ವಾಮಿಗಳ ಮಾರ್ಗದರ್ಶನದಲ್ಲಿ ಪಾಲ್ ಕೊಂಬು ತಂದರು. ಸಂಜೆ 6 ಗಂಟೆಗೆ ಊರಿನ ಪ್ರಮುಖ ಬೀದಿಗಳಲ್ಲಿ ಸ್ವಾಮಿಯ ಮೆರವಣಿಗೆ ಸಾಗಿತು. ರಾತ್ರಿ 8 ಗಂಟೆಯಿAದ ಬೆಳಗಿನ ಜಾವ 3 ಗಂಟೆಯವರೆಗೆ ಅಗ್ನಿ ಕುಂಡ ಪ್ರವೇಶ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನ ಟ್ರಸ್ಟ್ ಆಡಳಿತ ಮಂಡಳಿ ಸದಸ್ಯರು, ಊರಿನ ಪ್ರಮುಖರು ಹಾಗೂ ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿದ್ದ ಭಕ್ತರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net