ಮಂದಾರ್ತಿ ನಾಗಮಂಡಲ ಪೂರ್ವಭಾವಿ ಸಭೆ

nagamandalotsava
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.
Published on

ಕೊಕ್ಕರ್ಣೆ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಏ.12ರಂದು ಜರುಗುವ ಅಷ್ಟಪವಿತ್ರ ನಾಗಮಂಡಲೋತ್ಸವ ಪ್ರಯುಕ್ತ ಪೂರ್ವಭಾವಿ ಸಭೆ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಶೀಘ್ರದಲ್ಲಿ ಪ್ರತಿಯೊಬ್ಬರಿಗೂ ಆಮಂತ್ರಣ ತಲುಪಿಸುವ ನಿಟ್ಟಿನಲ್ಲಿ ವಲಯವಾರು ಆಮಂತ್ರಣ ಪತ್ರಿಕೆ ಹಂಚಿಕೆ ನಡೆಯಿತು. ಪ್ರಚಾರ ಕಾರ್ಯ, ಪುರ ಶೃಂಗಾರ, ಪೂಜಾ ಸಾಮಗ್ರಿಗಳ ಸಂಗ್ರಹಿಸುವಿಕೆ, ಹೊರೆಕಾಣಿಕೆ, ಪಾರ್ಕಿಂಗ್ ವ್ಯವಸ್ಥೆ, ಊಟೋಪಚಾರ ಸೇರಿ ವಿವಿಧ ವಿಷಯಗಳ ಕುರಿತು ಅಭಿಪ್ರಾಯ ಸಂಗ್ರಹಿಸಲಾಯಿತು. ದೇವಸ್ಥಾನ ಅಧ್ಯಕ್ಷ ಎಚ್.ಧನಂಜಯ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಜಯಮ್ಮ ಪಿ., ಸಹ ಮೊಕ್ತೇಸರರು, ಬ್ರಹ್ಮಾವರ ಪೊಲಿವಸ್ ಅಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net