ಮಂದಾರ್ತಿ ಶಾಲಾ ವಾರ್ಷಿಕೋತ್ಸವ

varshikotsava
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮಾತನಾಡಿದರು.
Published on

ಕೊಕ್ಕರ್ಣೆ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ ಇತ್ತೀಚೆಗೆ ಜರುಗಿತು.

ಮಂದಾರ್ತಿ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಎಚ್.ವಿಠ್ಠಲ ಶೆಟ್ಟಿ, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಮಂದಾರ್ತಿ ಆನುವಂಶಿಕ ಆಡಳಿತ ಮೊಕ್ತೇಸರ ಎಚ್.ಧನಂಜಯ ಶೆಟ್ಟಿ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಮುಖ್ಯ ಶಿಕ್ಷಕ ಅಶೋಕ್ ಕುಮಾರ್ ಶೆಟ್ಟಿ, ಶಾಸಕ ಕಿರಣ್‌ಕುಮಾರ್ ಕೊಡ್ಗಿ ಉಪಸ್ಥಿತರಿದ್ದರು.

ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಿವೃತ್ತ ಅಧ್ಯಾಪಕ ಜಯರಾಮ ಜೋಗಿ ಅವರನ್ನು ಸನ್ಮಾನಿಸಲಾಯಿತು. ಮಹೇಶ್ ಉಡುಪ ಪ್ರಸ್ತಾವನೆಗೈದರು. ನಿವೃತ್ತ ಮುಖ್ಯ ಶಿಕ್ಷಕ ಎಚ್.ಸುಧಾಕರ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಶಿಕ್ಷಕ ಉದಯ್ ಕುಮಾರ್ ಶೆಟ್ಟಿ ವರದಿ, ಆಶಾ ಸನ್ಮಾನಿತರ ಪಟ್ಟಿ ವಾಚಿಸಿದರು. ವೀಣಾ ಮತ್ತು ಗಾಯತ್ರಿ ಬಹುಮಾನ ವಿತರಣೆ ನಡೆಸಿದರು. ಸುಪ್ರೀತಾ ವಂದಿಸಿದರು. ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ನಿವೃತ್ತ ಅಧ್ಯಾಪಕ ಎಚ್.ಸುದರ್ಶನ ಶೆಟ್ಟಿ ಮತ್ತು ಆವರ್ಸೆ ಪ್ರೌಢಶಾಲಾ ಅಧ್ಯಾಪಕ ಶಶಿಧರ್ ಶೆಟ್ಟಿ ನಂಚಾರು ನಿರೂಪಿಸಿದರು. ವಿದ್ಯಾರ್ಥಿಗಳಾದ ಸಾತ್ವಿಕ್, ಸೇಜಲ್, ಗಗನಾ, ಶ್ರೀಶಾ, ಶ್ರಾವ್ಯಾ, ಅವಿನಾಶ್ ಮನೋರಂಜನಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net