

ಮಂಡ್ಯ: ನಗರದ ಕಲ್ಲಹಳ್ಳಿ ಬಡಾವಣೆಯಲ್ಲಿರುವ ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆಗೆ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸಮಗ್ರ ಪ್ರಶಸ್ತಿ ಲಭಿಸಿದೆ.
ಇಲ್ಲಿನ ಶಂಕರಪುರ ಸರ್ಕಾರಿ ಶಾಲೆಯಲ್ಲಿ ನಡೆದ 2024-25ನೇ ಸಾಲಿನ ಮಂಡ್ಯ-1 ಕ್ಲಸ್ಟರ್ ಮಟ್ಟದ ಕಿರಿಯ-ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಸ್ಪರ್ಧೆಯ ಬಹುತೇಕ ವಿಭಾಗಗಳಲ್ಲಿ ಭಾಗವಹಿಸಿದ್ದ ಮಾಂಡವ್ಯ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳನ್ನು ವಿದ್ಯಾಭಾರತಿ ಸಂಸ್ಥೆಯ ಅಧ್ಯಕ್ಷ ಪ್ರೊ.ಬಿ.ಶಿವಲಿಂಗಯ್ಯ, ಕಾರ್ಯದರ್ಶಿ ಡಾ.ಮೀರಾ ಶಿವಲಿಂಗಯ್ಯ ಅವರು ಅಭಿನಂದಿಸಿದರು. ಪ್ರಾಂಶುಪಾಲೆ ಸರೋಜಾ, ಮುಖ್ಯಶಿಕ್ಷಕಿ ಸುನೀತಾ, ನಾನಿಕ್ ಲಖಾನಿ, ಚಂದ್ರ ಲಖಾನಿ ಇದ್ದರು.