83 ವರ್ಷ ಪೂರೈಸಿದ ಮಂಡ್ಯ: ಜಿಲ್ಲಾಡಳಿತದಿಂದ ಸಂಭ್ರಮಾಚರಣೆ

2
Published on

ಮಂಡ್ಯ: ಜಿಲ್ಲೆ ರಚನೆಯಾಗಿ 84 ವರ್ಷಕ್ಕೆ ಕಾಲಿಟ್ಟಿರುವ ಹಿನ್ನೆಲೆಯಲ್ಲಿ ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಡಿಸಿ ಡಾ.ಕುಮಾರ ಅವರು ಕಚೇರಿ ಸಭಾಂಗಣದಲ್ಲಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು. ಬಳಿಕ ಎಲ್ಲರಿಗೂ ಸಾವಯವ ಬೆಲ್ಲವನ್ನು ಹಂಚಲಾಯಿತು. ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ನೌಕರರೆಲ್ಲರೂ ಒಂದೆಡೆ ಸೇರಿ ಫೋಟೋ ಕ್ಲಿಕ್ಕಿಸಿಕೊಂಡರು.

ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಂಟಿ ಕೃಷಿ ನಿರ್ದೇಶಕ ವಿ.ಅಶೋಕ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕಿ ಎಸ್.ಎಚ್.ನಿರ್ಮಲಾ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net