ಚೆಕ್‌ಪೋಸ್ಟ್‌ನಲ್ಲಿ ಎಲ್ಲ ವಾಹನಗಳ ತಪಾಸಣೆ ಕಡ್ಡಾಯ

20hgr 01
ಹಲಗೂರು ಸಮೀಪದ ದೇವಿರಹಳ್ಳಿ ಗೇಟ್ ಬಳಿ ತೆರೆದಿರುವ ಚುನಾವಣಾ ಚೆಕ್‌ಪೋಸ್ಟ್‌ಗೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ನೀಡಿ, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸಲಹೆ ನೀಡಿದರು.
Published on

ಹಲಗೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚೆಕ್‌ಪೋಸ್ಟ್‌ನಲ್ಲಿ ಮೂಲಕ ಹಾದು ಹೋಗುವ ಎಲ್ಲ ವಾಹನಗಳನ್ನು ಕಡ್ಡಾಯವಾಗಿ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ಕುಮಾರ ತಪಾಸಣಾ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಹಲಗೂರು ಸಮೀಪದ ದೇವಿರಹಳ್ಳಿ ಗೇಟ್ ಬಳಿ ತೆರೆದಿರುವ ಚುನಾವಣಾ ಚೆಕ್‌ಪೋಸ್ಟ್‌ಗೆ ಬುಧವಾರ ಭೇಟಿ ನೀಡಿ, ಅಧಿಕಾರಿ ಹಾಗೂ ಸಿಬ್ಬಂದಿಗೆ ಸಲಹೆ-ಸೂಚನೆಗಳನ್ನು ನೀಡಿದರು. ಈ ಭಾಗ ಮಂಡ್ಯ ಮತ್ತು ರಾಮನಗರ ಜಿಲ್ಲಾ ಗಡಿ ಪ್ರದೇಶ ಆಗಿದ್ದು, ಜಿಲ್ಲೆಯ ಒಳಗೆ ಬರುವ ಎಲ್ಲ ವಾಹನಗಳ ಸಂಖ್ಯೆಯನ್ನು ಪಡೆದು ಮಾಹಿತಿಯನ್ನು ಲಾಗ್ ಪುಸ್ತಕದಲ್ಲಿ ನೋಂದಾಯಿಸಿಕೊಳ್ಳಬೇಕು. ಚುನಾವಣೆ ಮುಗಿಯುವವರೆಗೂ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಿದರು.


ಹಲಗೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿರುವ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದ ಅಧಿಕಾರಿಗಳ ತಂಡ ಮತಗಟ್ಟೆ, ಮೂಲಸೌಕರ್ಯಗಳ ಕುರಿತು ಪರಿಶೀಲನೆ ನಡೆಸಿದರು. ಮತದಾನ ಕೇಂದ್ರದಲ್ಲಿ ಇಳಿಜಾರು ಇದ್ದು ದುರಸ್ತಿಗೊಳಿಸಲು ಕ್ರಮವಹಿಸಿ ಎಂದು ಸೂಚನೆ ನೀಡಿದರು.


ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಶೇಕ್ ತನ್ವೀರ್ ಆಸಿಫ್, ತಹಸೀಲ್ದಾರ್ ಕೆ.ಎನ್.ಲೋಕೇಶ್, ಎನ್.ಎಚ್-209 ವಿಶೇಷ ಭೂ ಸ್ವಾಧೀನ ಅಧಿಕಾರಿ ನಯಿದಾ ಜಮ್ ಜಮ್, ಪಿಡಿಒ ವಿಜಯ್ ಕುಮಾರ್, ವಿಎ ಸೋಮಶೇಖರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net