ಬಂಜಾರ ಸಮಾಜದಿಂದ ಪ್ರತಿಭಟನೆ

HN 4-3
Published on

ವಿಜಯಪುರ: ಮಂಡ್ಯ ಜಿಲ್ಲೆಯ ಮದ್ದೂರಿಗೆ ಕೂಲಿ ಮಾಡಲು ವಲಸೆ ಹೋಗಿದ್ದ ಬಂಜಾರ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಶುಕ್ರವಾರ ನಗರದಲ್ಲಿ ಸಮಾಜ ಬಾಂಧವರು ಬೃಹತ್ ಪ್ರತಿಭಟನೆ ನಡೆಸಿದರು.

ಬಂಜಾರ ಕ್ರಾಂತಿದಳದ ಅಧ್ಯಕ್ಷ ಶಂಕರ ಚವ್ಹಾಣ್ ಮಾತನಾಡಿ, ಕಬ್ಬು ಕಟಾವು ಮಾಡಲು ಹೋಗಿದ್ದ ಬಂಜಾರ ಸಮುದಾಯದ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬರ್ಬರ ಕೊಲೆ ಮಾಡಿರುವುದನ್ನು ಸಮಾಜವು ತೀವ್ರವಾಗಿ ಖಂಡಿಸುತ್ತದೆ. ಅಮಾನವೀಯ ಘಟನೆಗಳು ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವೈದ್ಯ ಡಾ.ಬಾಬುರಾಜೇಂದ್ರ ನಾಯಕ ಮಾತನಾಡಿ, ಬಾಲಕಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದರು.

ತೊರವಿಯ ಗೋಪಾಲ ಮಹಾರಾಜರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆಯು ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿತು. ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಮುಖಂಡರಾದ ಮಲ್ಲಿಕಾರ್ಜುನ ನಾಯಕ, ಬಿ.ಬಿ.ಲಮಾಣಿ, ಡಾ.ಅರವಿಂದ ಲಮಾಣಿ, ಸುರೇಶ ಬಿಜಾಪುರ, ಶಾರದಾ ಚವ್ಹಾಣ್, ರಾಜು ಜಾಧವ, ಸುನೀಲ ರಾಠೋಡ, ರಾಕೇಶ ರಜಪೂತ, ಪ್ರಕಾಶ ರಾಠೋಡ, ರಾಜು ನಾಯಕ, ಮೋಹನ ನಾಯಕ ಇತರರು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net