ಸಚಿವ ಸಂಪುಟದಲ್ಲಿ ಮೈಶುಗರ್ ತೀರ್ಮಾನ

21MND-2
Published on

ಮಂಡ್ಯ: ಮೈಶುಗರ್ ಕಾರ್ಖಾನೆ ಪ್ರಾರಂಭಿಸುವ ಸಂಬಂಧ ಮುಂದಿನ ಸಚಿವ ಸಂಪುಟದಲ್ಲಿ ಮಂಡಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಅರೆಬೈಲ್ ಶಿವರಾಮ್ ಹೆಬ್ಬಾರ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರಿಂದ ಕಾರ್ಖಾನೆ ಪ್ರಾರಂಭಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಮಾತನಾಡಿದರು. ಕಾರ್ಖಾನೆಯಲ್ಲಿ ಕಬ್ಬು ನುರಿಸುವಿಕೆ ಕಾರ್ಯಾಚರಣೆ ಮತ್ತು ನಿರ್ವಹಣೆ ಮಾದರಿಯಲ್ಲೇ ಪುನಃ ಸ್ಥಾಪಿಸಲಾಗುವುದೆಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ ಸುಮಲತಾ ಅಂಬರೀಷ್, ಬೆಂಗಳೂರಿನಲ್ಲಿ ಮೇ 15ರಂದು ಆಯೋಜಿಸಿದ್ದ ಸಭೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಮೈಶುಗರ್ ಕಾರ್ಖಾನೆ ಕಾರ್ಯನಿರ್ವಹಣೆ ಬಗ್ಗೆ ಸಕಾರಾತ್ಮಕ ಸ್ಪಂದನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯ ಮರು ಸ್ಥಾಪನೆ ಹಾಗೂ ರೈತರ ಮನದಾಳವನ್ನರಿತು ತ್ವರಿತವಾಗಿ ಕ್ರಮ ತೆಗೆದುಕೊಳ್ಳುವಂತೆ ಮನವಿ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net