ತ್ರಿಬಲ್ ಮರ್ಡರ್​ಗೆ ಬೆಚ್ಚಿಬಿದ್ದ ಸಕ್ಕರೆ ನಾಡು: ದೇವಾಲಯ ಆವರಣದಲ್ಲೇ ನಡೆಯಿತು ಭೀಕರ ಕೊಲೆ

Triple Murder
Published on

ಮಂಡ್ಯ: ತಲೆ ಮೇಲೆ ಕಲ್ಲು ಹಾಕಿ ಮೂವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಕ್ಕರೆನಾಡಿನ ಜನತೆಯನ್ನು ಬೆಚ್ಚಿಬೀಳಿಸಿದೆ.

ಗಣೇಶ, ಪ್ರಕಾಶ ಮತ್ತು ಆನಂದ ಕೊಲೆಯಾದವರು. ಗುರುವಾರ ರಾತ್ರಿ ಮಂಡ್ಯದ ಅರ್ಕೇಶ್ವರ ದೇವಾಲಯದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಮೂವರು ಅರ್ಚಕರಾಗಿ ಹಾಗೂ ಸೆಕ್ಯುರಿಟಿ ಆಗಿ ಕೆಲಸ ಮಾಡುತ್ತಿದ್ದರು. ರಾತ್ರಿ ಮಲಗಿರುವುವಾಗ ತಲೆ ಮೇಲೆ ಕಲ್ಲು ಎತ್ತಿಹಾಕಿ ದೇವಾಲಯದ ಆವರಣದಲ್ಲೇ ಕೊಲೆ ಮಾಡಿದ್ದಾರೆ.

ದುಷ್ಕರ್ಮಿಗಳು ದೇವಸ್ಥಾನದ ಹುಂಡಿ ಹೊತ್ತೊಯ್ದು ಹೊರಗೆ ಬಿಸಾಡಿದ್ದು, ಹುಂಡಿ ಹಣಕ್ಕಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಮಂಡ್ಯ ಪೂರ್ವ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. (ದಿಗ್ವಿಜಯ ನ್ಯೂಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net