ತರಕಾರಿ ಇಟ್ಟುಕೊಂಡು ಮಹಿಳಾ ಸಂಘಟನೆಯಿಂದ ಪ್ರತಿಭಟನೆ

10_11_Mdy_Protest
Published on

ಮಂಡ್ಯ: ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಹಾಗೂ ಗೋದಾಮುಗಳಲ್ಲಿ ಕೊಳೆಯುತ್ತಿರುವ ಆಹಾರ ಧಾನ್ಯಗಳ ವಿಲೇವಾರಿಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಧಿಕಾರಿ ಕಚೇರಿ ಎದುರು ಗ್ಯಾಸ್ ಸ್ಟೌ, ತರಕಾರಿಗಳನ್ನಿಟ್ಟು ವಿನೂತನವಾಗಿ ಪ್ರತಿಭಟನೆ ನಡೆಸುವುದರ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಗೋದಾಮುಗಳಲ್ಲಿ ಅಪಾರ ಪ್ರಮಾಣದ ಆಹಾರ ಧಾನ್ಯಗಳು ಕೊಳೆತು ನಾರುತ್ತಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. 43,258 ಟನ್ ಅಕ್ಕಿ, 1,716 ಟನ್ ಗೋಧಿ, 12,046 ಟನ್ ತೊಗರಿಬೇಳೆ, ಖಾದ್ಯ ತೈಲಗಳು ಮನುಷ್ಯರ ಬಳಕೆಗೆ ಯೋಗ್ಯವಲ್ಲದ ಸ್ಥಿತಿ ತಲುಪಿವೆ ಎಂಬುದು ಅತ್ಯಂತ ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ ಸಂಘಟನೆ ರಾಜ್ಯಾಧ್ಯಕ್ಷೆ ದೇವಿ, ಜಿಲ್ಲಾಧ್ಯಕ್ಷೆ ಶೋಭಾ ಮಂಜುಳಾ, ಸುಶೀಲಾ, ಪ್ರೇಮಾ, ಜಯಶೀಲ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net