ಸಕ್ಕರೆ ನಾಡಿನಲ್ಲಿ ವರುಣಾರ್ಭಟ: ಜಿಲ್ಲೆಯ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಣೆ

Rainmandya
Published on

ಮಂಡ್ಯ: ಜಿಲ್ಲೆಯಲ್ಲಿ ರಣಭೀಕರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಆ.5ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಸ್‌.ಅಶ್ವಥಿ ಆದೇಶ ಹೊರಡಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ, ಎಲ್​​ಕೆಜಿ, ಯುಕೆಜಿ ಸೇರಿದಂತೆ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿದ್ದಾರೆ.

ಸಕ್ಕರೆ ನಾಡಿನಲ್ಲಿ ಪ್ರವಾಹ: ಭಾರಿ ಮಳೆ ಹಿನ್ನೆಲೆಯಲ್ಲಿ ಮಂಡ್ಯದ ಕೆಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಮಧ್ಯೆ ಬೆಂಗಳೂರು-ಮೈಸೂರು ನಡುವಿನ ಹತ್ತು ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ. ಬಹುತೇಕ ಮೆಮೂ ಹಾಗೂ ಪ್ಯಾಸೆಂಜರ್ ರೈಲುಗಳ ಸಂಚಾರ ಸ್ಥಗಿತಗೊಂಡಿದ್ದು, ಉಳಿದಂತೆ ಕೆಲವು ರೈಲುಗಳ ಸಂಚಾರ ಸಮಯದಲ್ಲಿ ವ್ಯತ್ಯಾಸವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net