

ಶ್ರೀರಂಗಪಟ್ಟಣ: ತಾಲೂಕಿನ ಚಂದಗಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಜ್ಞಾನೇಶ್ವರ್ ಹಾಗೂ ಉಪಾಧ್ಯಕ್ಷರಾಗಿ ಮಾದಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಇವರನ್ನು ಹೊರತು ಪಡಿಸಿ ಬೇರಾರು ನಾಮಪತ್ರ ಸಲ್ಲಿಸದ ಕಾರಣ ಅವಿರೋಧ ಆಯ್ಕೆಯನ್ನು ಚುನಾವಣಾಧಿಕಾರಿ ಪ್ರಕಟಿಸಿದರು.
ನಿರ್ದೇಶಕರಾದ ಮಂಜುನಾಥ್, ಸ್ವಾಮಿ, ಸಿ.ಕೆ.ರಮೇಶ್, ವರದರಾಜು, ಶ್ರೀನಿವಾಸ.ಪಿ, ಎಚ್.ರವಿ ವರ್ಮ, ಕೆಂಪಯ್ಯ ಹಾಗೂ ಸುಮಿತ್ರಾ, ನಂದಿನಿ, ಸಂಘದ ಮಾಜಿ ಅಧ್ಯಕ್ಷ ರಾಮಚಂದ್ರು, ಗ್ರಾಮ ಪಂಚಾಯಿತಿ ಸದಸ್ಯ ಶಿವಕುಮಾರ್, ಕಾರ್ಯದರ್ಶಿ ನಾಗೇಂದ್ರ, ಮುಖಂಡರಾದ ಧನರಾಜ್, ಕಾಶಿ, ಕೃಷ್ಣಪ್ಪ, ಬಿಜೆಪಿ ಮುಖಂಡ ದಿಲ್ದಾರ್ ರವಿ ಇತರರು ಇದ್ದರು.