ಮಂಡ್ಯದ ವಿವೇಕಾನಂದ ಅವರಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಬಿ ಫಾಂ

13
Published on

ಮೈಸೂರು: ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳ ವ್ಯಾಪ್ತಿ ಒಳಗೊಂಡಿರುವ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿ ಅಂತಿಮಗೊಂಡಿದ್ದು, ಮಂಡ್ಯದ ವಿವೇಕಾನಂದ ಅವರಿಗೆ ಟಿಕೆಟ್ ನೀಡಲಾಗಿದೆ. ವಿವೇಕಾನಂದ ಜೆಡಿಎಸ್-ಬಿಜೆಪಿ ಮೈತ್ರಿ ಕೂಟದ ಅಧಿಕೃತ ಅಭ್ಯರ್ಥಿ ಎಂದು ಜೆಡಿಎಸ್ ನಾಯಕರ ಕೇಳಿದ್ದಾರೆ.

ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರಿ ಕಂಠೇಗೌಡ ಹಾಗೂ ವಿವೇಕಾನಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಇವರಲ್ಲಿ ವಿವೇಕಾನಂದ ಅವರು ಟಿಕೆಟ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ವಿಧಾನಪರಿಷತ್ ಚುನಾವಣೆಯಲ್ಲೂ ಬಿಜೆಪಿ- ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಈ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಡಲಾಗಿದೆ. ಮೇ 12 ರಂದು ಬಿಜೆಪಿ ಪ್ರಕಟಿಸಿದ್ದ ಪಟ್ಟಿಯಲ್ಲಿ ಮೈಸೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ. ನಿಂಗರಾಜ್ ಗೌಡ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು. ನಂತರ ನಡೆದ ಬೆಳವಣಿಗೆಯಲ್ಲಿ ಜೆಡಿಎಸ್ ನಾಯಕರ ಒತ್ತಾಯದಂತೆ ಕ್ಷೇತ್ರವನ್ನು ಬಿಟ್ಟು ಕೊಡಲಾಗಿದೆ. ನಿಂಗರಾಜ್ ಗೌಡ ಅವರಿಗೆ ಕೈ ಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ವಿವೇಕಾನಂದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಎಂದು ಜೆಡಿಎಸ್ ಮುಖಂಡರು ಹೇಳಿದ್ದಾರೆ.

ಬಿ ಫಾರಂ ವಿತರಣೆ: ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿವೇಕಾನಂದ ಅವರಿಗೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡ ಅವರು ಬುಧವಾರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಬಿ ಫಾರಂ ವಿತರಿಸಿದ್ದಾರೆ. ಬಿ ಫಾರಂ ವಿತರಣೆ ಸಂದರ್ಭದಲ್ಲಿ ಜೆಡಿಎಸ್‌ನ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಮುಖಂಡರಾದ ನಿರಂಜನಮೂರ್ತಿ ಹಾಗೂ ನಾಗಣ್ಣ ಗೌಡ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net