ಹಲಗೂರು: ಸಮೀಪದ ನಂಜಾಪುರ ಗ್ರಾಮದ ಮಹದೇವ್ ಅವರ ಜಮೀನಿನ ಸೀಮೆ ಹುಲ್ಲಿನಲ್ಲಿ ಸುಮಾರು 10 ಅಡಿ ಉದ್ದದ ಹೆಬ್ಬಾವು ಪತ್ತೆಯಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಉರಗ ಪ್ರೇಮಿ ಜಗದೀಶ್ ಮಾತನಾಡಿ, ಸುಮಾರು 10 ಅಡಿ ಉದ್ದದ ಹೆಬ್ಬಾವನ್ನು ಸುರಕ್ಷಿತವಾಗಿ ಸಂರಕ್ಷಿಸಿ ಬಸವನ ಬೆಟ್ಟದ ಅರಣ್ಯ ಪ್ರದೇಶಕ್ಕೆ ಬಿಡಲಾಗುವುದು ಎಂದು ತಿಳಿಸಿದರು.
ಜಮೀನಿನ ಮಾಲೀಕ ಮಹದೇವ್ ಮಾತನಾಡಿ, ನಮ್ಮ ಜಮೀನಿನಲ್ಲಿ ಕಾಡುಪ್ರಾಣಿಗಳ ಕಾಟ ಹೆಚ್ಚಾಗಿದೆ. ಹಂದಿ, ಆನೆ, ಚಿರತೆಗಳ ಉಪಟಳದ ನಡುವೆ ಹೆಬ್ಬಾವು ಕೂಡ ಕಾಣಿಸಿಕೊಂಡಿದೆ. ಈ ಕುರಿತು ಅರಣ್ಯಾಧಿಕಾರಿಗಳಿಗೆ ತಿಳಿಸಿದರೂ ಎರಡು ಗಂಟೆಗಳಾದರೂ ಯಾರೂ ಸ್ಥಳಕ್ಕೆ ಭೇಟಿ ನೀಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.