ಸ್ಥಳಕ್ಕೆ ಆಗಮಿಸಿದ ಮಳವಳ್ಳಿ ಡಿವೈಎಸ್ಪಿ ಯಶವಂತ್ ಕುಮಾರ್, ಸಿಪಿಐ ನಾರಾಯಣಿ ಹಾಗೂ ಕೆಸ್ತೂರು ಪಿಎಸ್‌ಐ ಹಾಗೂ ಪೊಲೀಸರು ಪರಿಶೀಲನೆ ನಡೆಸಿ ಗಾಂಜಾ ಸಮೇತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆತನ ಹೆಸರನ್ನು ಬಹಿರಂಗ ಪಡಿಸಿಲ್ಲ. ಗಾಂಜಾ ಸೊಪ್ಪು ಯಾರು, ಎಲ್ಲಿಗೆ ಸಾಗಿಸುತ್ತಿದ್ದರು ಎಂಬ ಬಗ್ಗೆ ತನಿಖೆ ಪೂರ್ಣಗೊಂಡ ಬಳಿಕ ತಿಳಿಯಲಿದೆ. ಈ ಬಗ್ಗೆ ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.