ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಮಳವಳ್ಳಿ ತಾಲೂಕಿನ ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳನ್ನು ಶನಿವಾರ ಶಾಲಾ ಅಭಿವೃದ್ಧಿ ಸಮಿತಿ ಹಾಗೂ ಬೋಧಕ ವರ್ಗದಿಂದ ಅಭಿನಂದಿಸಲಾಯಿತು. ಶಿಕ್ಷಕ ನಾಗೇಂದ್ರಮೂರ್ತಿ, ದ್ವಿತಿಯ ದರ್ಜೆ ಸಹಾಯಕಿ ಅನುಪಮಾ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಚಂದ್ರಶೇಖರ ಆಚಾರಿ, ಎಸ್‌ಡಿಎಂಸಿ ಸದಸ್ಯರಾದ ವೆಂಕಟೇಶ್, ಲಿಂಗರಾಜು, ನಿಂಗಮ್ಮ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಅತ್ಯುನ್ನತ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆ
ಮಳವಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಾಲೂಕಿನ ದೊಡ್ಡಬೂಹಳ್ಳಿ ಸರ್ಕಾರಿ ಪ್ರೌಢಶಾಲೆ ಶೇ.100 ರಷ್ಟು ಫಲಿತಾಂಶ ಪಡೆದುಕೊಂಡಿದೆ.
ಪರೀಕ್ಷೆ ಬರೆದ 38 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಅತ್ಯುನ್ನತ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ಹಾಗೂ ಪ್ರಥಮ ದರ್ಜೆ 10 ಮತ್ತು ದ್ವಿತೀಯ ದರ್ಜೆಯಲ್ಲಿ 21 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶ್ರಮದಿಂದ ಅಧ್ಯಯನ ಮಾಡಿ ಉತ್ತಮ ಸಾಧನೆ ಮಾಡಿದ್ದಾರೆ. ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಮುಖ್ಯ ಶಿಕ್ಷಕ ನಾಗೇಂದ್ರಮೂರ್ತಿ, ದ್ವಿತಿಯ ದರ್ಜೆ ಸಹಾಯಕಿ ಅನುಪಮಾ, ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಚಂದ್ರಶೇಖರ ಆಚಾರಿ, ಎಸ್‌ಡಿಎಂಸಿ ಸದಸ್ಯರಾದ ವೆಂಕಟೇಶ್, ಲಿಂಗರಾಜು, ನಿಂಗಮ್ಮ ಇದ್ದರು.
ರಾಗಿಬೊಮ್ಮನಹಳ್ಳಿ ಸರ್ಕಾರಿ ಶಾಲೆಗೆ ಶೇ. 92.5 ಫಲಿತಾಂಶ: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿದ್ದ ತಾಲೂಕಿನ ರಾಗಿಬೊಮ್ಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ 40 ವಿದ್ಯಾರ್ಥಿಗಳ ಪೈಕಿ 37 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ.92.5 ಫಲಿತಾಂಶ ಪಡೆದುಕೊಂಡಿದೆ.
ಅತ್ಯುನ್ನತ ಶೇಣಿಯಲ್ಲಿ ನಾಲ್ಕು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 16 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಎಚ್.ಎಂ. ಶ್ರೇಯಾ 601, ಆರ್.ಎಂ.ಆಶಾ 566, ಎಚ್.ಎನ್.ಅಶ್ವಿನಿ 565, ವೈ.ಎಸ್.ಹೇಮಲತಾ 545 ಅಂಕ ಪಡೆದು ಸಾಧನೆ ಮಾಡಿದ್ದಾರೆ. ಕಳೆದ ಬಾರಿ ಶೇ.62 ಫಲಿತಾಂಶ ಪಡೆದಿದ್ದು, ಪ್ರಸ್ತುತ ಸಾಲಿನ ಫಲಿತಾಂಶದಲ್ಲಿ ಗಣನೀಯ ಸಾಧನೆ ಮಾಡಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net