ಮಹನೀಯರ ಜಯಂತಿಗಳ ಸರಳ ಆಚರಣೆಗೆ ತೀರ್ಮಾನ Maddur National Festivals Celebration Committee Rashtrakavi Kuvempu World Human Day Amarashilpi Jakanachari Memorial Day Grade-2 Tehsildar Somashekhar

ಮದ್ದೂರು ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ನಡೆದ ವಿಶ್ವಮಾನವ ಹಾಗೂ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಪೂರ್ವಭಾವಿ ಸಭೆ ವೇಳೆ ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ಮಾತನಾಡಿದರು. ರಾಮಲಿಂಗಯ್ಯ, ಸುರೇಶ್ ಇದ್ದರು.
ಮದ್ದೂರು ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ನಡೆದ ವಿಶ್ವಮಾನವ ಹಾಗೂ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯ ಪೂರ್ವಭಾವಿ ಸಭೆ ವೇಳೆ ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ಮಾತನಾಡಿದರು. ರಾಮಲಿಂಗಯ್ಯ, ಸುರೇಶ್ ಇದ್ದರು.
Published on
ಮದ್ದೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಆಡಳಿತ ರಾಷ್ಟ್ರಕವಿ ಕುವೆಂಪು ವಿಶ್ವಮಾನವ ದಿನಾಚರಣೆ ಹಾಗೂ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಸರಳವಾಗಿ ಆಚರಿಸಲು ತೀರ್ಮಾನಿಸಿರುವುದಾಗಿ ಗ್ರೇಡ್-2 ತಹಸೀಲ್ದಾರ್ ಸೋಮಶೇಖರ್ ತಿಳಿಸಿದರು.
ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಬುಧವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ವಿಶ್ವಮಾನವ ದಿನಾಚರಣೆ ಹಾಗೂ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನವನ್ನು ಪ್ರತ್ಯೇಕವಾಗಿ ಆಚರಿಸಲು ಸಭೆ ತೀರ್ಮಾನಿಸಿರುವುದಾಗಿ ಹೇಳಿದರು.
ಡಿ.29ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ರಾಷ್ಟ್ರಕವಿ ಕುವೆಂಪು ವಿಶ್ವಮಾನವ ದಿನವನ್ನು ತಾಲೂಕು ಆಡಳಿತ ವತಿಯಿಂದ ಆಚರಿಸುವುದಾಗಿ ತಿಳಿಸಿದರು. ಜನವರಿ 1ರಂದು ಬೆಳಗ್ಗೆ 11 ಗಂಟೆಗೆ ತಾಲೂಕು ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ ದಿನವನ್ನು ಆಚರಿಸುವ ಜತೆಗೆ ತಾಲೂಕಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಐದು ಮಂದಿ ಸಾಧಕರನ್ನು ಗುರುತಿಸಿ ತಾಲೂಕು ಆಡಳಿತದಿಂದ ಅಭಿನಂದಿಸಲಾಗುವುದು ಎಂದರು.
ಎರಡು ಕಾರ್ಯಕ್ರಮಗಳನ್ನು ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು. ವಿವಿಧ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕೋರಿದರು.
ತಾ.ಪಂ. ಇಒ ರಾಮಲಿಂಗಯ್ಯ ಮಾತನಾಡಿ, ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಪ್ರತಿ ಗ್ರಾ.ಪಂ. ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರ ಭಾವಚಿತ್ರಗಳನ್ನಿಟ್ಟು ಕಾರ್ಯಕ್ರಮ ಆಯೋಜಿಸುವಂತೆ ಸಂಬಂಧಿಸಿದ ಪಿಡಿಒ ಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದರು.
ತಾ.ಪಂ. ಸಂಯೋಜನಾಧಿಕಾರಿ ಸುರೇಶ್, ಅಖಿಲ ಕರ್ನಾಟಕ ವಿಶ್ವಕರ್ಮ ತಾಲೂಕು ಘಟಕದ ಅಧ್ಯಕ್ಷ ಎಂ.ಪಿ.ಮಹೇಶ್, ವಿಶ್ವಕರ್ಮ ಸಮಾಜದ ಯುವಘಟಕದ ಜಿಲ್ಲಾಧ್ಯಕ್ಷ ತೈಲೂರು ಆನಂದಾಚಾರಿ, ಉಪಾಧ್ಯಕ್ಷ ಕೆ.ಬೆಳ್ಳೂರು ಸ್ವಾಮಿ, ಮುಖಂಡರಾದ ಈಶ್ವರಾಚಾರ್, ಸುವರ್ಣ, ನಾಗರತ್ನಾ, ಬಸವಾಚಾರಿ, ಕೃಷ್ಣಾಚಾರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net