ನಾಗಮಂಗಲದಲ್ಲಿ ಶೇ.86 ಪರಿಷ್ಕರಣೆ

ನಾಗಮಂಗಲ ಪಟ್ಟಣದ ಶ್ರೀ ಸೌಮ್ಯಕೇಶವ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜನ ಜಾಗೃತಿ ಅಭಿಯಾನದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿದರು.  ಬಿ.ಎಸ್.ಸತೀಶ್,  ಎಸ್.ಆರ್.ಲೋಕೇಶ್, ಕೆ.ರವೀಶ್, ಕೃಷ್ಣಮೂರ್ತಿ,  ಸಂದೀಪ್ ಇದ್ದರು.
ನಾಗಮಂಗಲ ಪಟ್ಟಣದ ಶ್ರೀ ಸೌಮ್ಯಕೇಶವ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಬುಧವಾರ ಸಂಜೆ ಆಯೋಜಿಸಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಜನ ಜಾಗೃತಿ ಅಭಿಯಾನದಲ್ಲಿ ಜಿಪಂ ಸಿಇಒ ಕೆ.ಆರ್.ನಂದಿನಿ ಮಾತನಾಡಿದರು. ಬಿ.ಎಸ್.ಸತೀಶ್, ಎಸ್.ಆರ್.ಲೋಕೇಶ್, ಕೆ.ರವೀಶ್, ಕೃಷ್ಣಮೂರ್ತಿ, ಸಂದೀಪ್ ಇದ್ದರು.
Published on
ನಾಗಮಂಗಲ: ತಾಲೂಕಿನಲ್ಲಿ ಎಲ್ಲ ಇಲಾಖೆಗಳ ಸಮನ್ವಯದಿಂದ ಶೇ.86ರಷ್ಟು ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಮುಗಿಸಿರುವ ಬಿಎಲ್‌ಒಗಳು ಉಳಿದಿರುವ ಕಾಲಾವಧಿಯೊಳಗೆ ಶೇ.100ರಷ್ಟು ಗುರಿ ಸಾಧನೆ ಮಾಡಬೇಕು ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.
ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ, ಜಿಲ್ಲಾ ಪಂಚಾಯಿತಿ, ತಾಲೂಕು ಆಡಳಿತ, ತಾಲೂಕು ಸ್ವೀಪ್ ಸಮಿತಿ ಹಾಗೂ ತಾಲೂಕು ಪಂಚಾಯಿತಿಯಿಂದ ಬುಧವಾರ ಸಂಜೆ ಆಯೋಜಿಸಿದ್ದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಬುಧವಾರ ಆಯೋಜಿಸಿದ್ದ ಜನ ಜಾಗೃತಿ ಅಭಿಯಾನದಲ್ಲಿ ಮಾತನಾಡಿದರು.
ತಾಲೂಕಿನ ಗ್ರಾಮೀಣ ಪ್ರದೇಶದ ಬಹುತೇಕ ಜನರು ಬೆಂಗಳೂರಿನಲ್ಲಿ ನೆಲೆಸಿದ್ದರೂ ಕೂಡ ನಾಗಮಂಗಲ ತಾಲೂಕಿನಲ್ಲಿ ಮತದಾನದ ಹಕ್ಕು ಹೊಂದಿದ್ದಾರೆ. ಅಂತಹವರನ್ನು ಪತ್ತೆ ಹಚ್ಚುವುದು ಒಂದು ಸವಾಲಾಗಿದೆ. ಆ.8ರ ವರೆಗೆ ಎಸ್‌ಐಆರ್ ಮುಗಿಸಲು ಕಾಲಾವಕಾಶವಿದ್ದು ಬಿಎಲ್‌ಒಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಯಾವೊಬ್ಬ ಮತದಾರರೂ ಸಹ ಎಸ್‌ಐಆರ್‌ನಿಂದ ಹೊರಗುಳಿಯದಂತೆ ಎಸ್‌ಐಆರ್ ಪ್ರಕ್ರಿಯೆ ಮುಗಿಸಬೇಕು. ಎಸ್‌ಐಆರ್ ನವೀಕರಿಸದಿದ್ದರೆ ಅಂತಹವರ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದಿಲ್ಲ ಎಂದರು.
ಬಿಎಲ್‌ಒಗಳಿಗೆ ಡಿಜಿಟಲೀಕರಣ ಕಷ್ಟ ಎನಿಸಿದಾಗ ಇತರ ಇಲಾಖೆಗಳ ಸಹಕಾರ ಪಡೆದುಕೊಳ್ಳಬೇಕು. ಎಸ್‌ಐಆರ್ ಫಾರ್ಮ್ ಅನ್ನು ಡಿಜಿಟಲೀಕರಣ ಮಾಡಲು ಹಾಗೂ ಮನೆಗಳ ಪತ್ತೆ ಹಚ್ಚಲು ಕಷ್ಟ ಎನಿಸಿದರೆ ಅಥವಾ ಫಾರ್ಮ್ ತಲುಪಿಸಲು ಇತರ ಇಲಾಖೆಗಳ ಸಹಕಾರ ಪಡೆಯಿರಿ. ಶೇ.90ರಷ್ಟು ಎಸ್‌ಐಆರ್ ಮಾಡುವುದು ಕಷ್ಟವಿದೆ. ಇನ್ನು ಶೇ.100ರಷ್ಟು ಮಾಡುವುದು ಒಂದು ದೊಡ್ಡ ಸವಾಲಾಗಿರುತ್ತದೆ. ಈ ಕಾರ್ಯಕ್ಕೆ ಎಲ್ಲ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದು ಹೇಳಿದರು.
ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಎಸ್‌ಐಆರ್ ಪ್ರಕ್ರಿಯೆಗೆ ಸಂಬಂಧಿಸಿದಂತೆ ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಹೊಂದಲಾಗಿತ್ತು. ಆದರೆ ತಾಲೂಕಿನಲ್ಲಿ ಅತ್ಯಂತ ವಿಶೇಷವಾಗಿ ಕಾರ್ಯಕ್ರಮ ಆಯೋಜಿಸುವ ಮೂಲಕ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯದಿಂದ ಇರುವುದನ್ನು ಸಾಬೀತು ಮಾಡಿ ಮಾದರಿಯಾಗಿದ್ದಾರೆ. ಈ ಜಾಗೃತಿ ಅಭಿಯಾನದಲ್ಲಿ ಅಂಗವಿಕಲರು ಪಾಲ್ಗೊಂಡಿರುವುದು ವಿಶೇಷವಾಗಿದೆ. ಒಟ್ಟಾಗಿ ಕೆಲಸ ಮಾಡಿರುವುದು ಅತ್ಯಂತ ಶ್ಲಾಘನೀಯ. ಇದಕ್ಕಾಗಿ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು, ಬಿಎಲ್‌ಒಗಳು, ಅಂಗನವಾಡಿ ಕಾರ್ಯಕರ್ತೆಯರೂ ಸೇರಿದಂತೆ ಎಲ್ಲರಿಗೂ ಧನ್ಯವಾದಗಳು. ತಾಲೂಕಿನಲ್ಲಿ ಉತ್ತಮ ಸಾಧನೆ ಮಾಡಿರುವ ಬಗ್ಗೆ ರಾಜ್ಯ ಚುನಾವಣಾ ಆಯೋಗಕ್ಕೂ ವರದಿ ನೀಡಲಾಗುವುದು ಎಂದರು.
ತಾಪಂ ಇಒ ಬಿ.ಎಸ್.ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಆರ್.ಲೋಕೇಶ್, ಕ್ಷೇತ್ರ ಸಮನ್ವಯಾಧಿಕಾರಿ ಕೆ.ರವೀಶ್, ಸಿಡಿಪಿಒ ಕೃಷ್ಣಮೂರ್ತಿ, ತಾಪಂ ಯೋಜನಾಧಿಕಾರಿ ಸಂದೀಪ್, ಸಹಾಯಕ ನಿರ್ದೇಶಕ ವಿ.ಕೃಷ್ಣಮೂರ್ತಿ ಸೇರಿದಂತೆ ತಾಲೂಕಿನ ಎಲ್ಲ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು, ಗ್ರಾಪಂಗಳ ಪಿಡಿಒಗಳು, ಕಂಪ್ಯೂಟರ್ ಆಪರೇಟರ್‌ಗಳು, ವಾಟರ್‌ಮನ್‌ಗಳು ಹಾಗೂ ವಿಶೇಷ ಚೇತನರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net