ಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಛಿದ್ರ

 ಕೆ.ಎಂ.ದೊಡ್ಡಿ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿದರು.
ಕೆ.ಎಂ.ದೊಡ್ಡಿ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿದರು.
Published on
ಕೆ.ಎಂ.ದೊಡ್ಡಿ: ಸಮೀಪದ ಹರಳಹಳ್ಳಿ ಗ್ರಾಮದಲ್ಲಿ ಗುರುವಾರ ಕಾಡು ಪ್ರಾಣಿಗಳ ಬೇಟೆಗಾಗಿ ಕಿಡಿಗೇಡಿಗಳು ಇಟ್ಟಿದ್ದ ನಾಡ ಬಾಂಬ್‌ಅನ್ನು ಹಸುವೊಂದು ಕಚ್ಚಿದ ಹಿನ್ನೆಲೆಯಲ್ಲಿ ನಾಡ ಬಾಂಬ್ ಸ್ಫೋಟಗೊಂಡು ಹಸು ಗಂಭೀರವಾಗಿ ಗಾಯಗೊಂಡಿದೆ.
ಗ್ರಾಮದ ರಾಜಮ್ಮಣಿ ಅವರಿಗೆ ಸೇರಿದ ಹಸು ಮಾದರಹಳ್ಳಿ ಗ್ರಾಮದ ಬೊಮ್ಮೆಜೋಗಿ ಅವರ ಜಮೀನಿನಲ್ಲಿ ಮೇಯಲು ಬಿಟ್ಟಿದ್ದರು. ಈ ಪ್ರದೇಶದಲ್ಲಿ ಕಿಡಿಗೇಡಿಗಳು ಕಾಡು ಪ್ರಾಣಿಗಳ ಬೇಟೆಗಾಗಿ ನಾಡ ಬಾಂಬ್ ಇಟ್ಟಿದ್ದರು. ಗುರುವಾರ ಮಧ್ಯಾಹ್ನ ಹಸು ಮೇಯುತ್ತಿದ್ದ ವೇಳೆ ನಾಡ ಬಾಂಬ್‌ಗೆ ಬಾಯಿ ಹಾಕಿದೆ ಎನ್ನಲಾಗಿದೆ. ಈ ವೇಳೆ ಬಾಂಬ್ ಸ್ಫೋಟಗೊಂಡು ಹಸುವಿನ ಬಾಯಿ ಸಂಪೂರ್ಣ ಛಿದ್ರವಾಗಿ ಹಸುವಿನ ಸ್ಥಿತಿ ಗಂಭೀರವಾಗಿದೆ.
ಘಟನೆಯಿಂದ ಗಾಬರಿಗೊಂಡು ಹಸುವಿನ ಮಾಲೀಕಿ ರಾಜಮ್ಮಣ್ಣಿ ಗ್ರಾಮಸ್ಥರಿಗೆ ವಿಷಯ ತಿಳಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಸ್ಥಳೀಯರು ಪಶು ವೈದ್ಯಾಧಿಕಾರಿಯನ್ನು ಕರೆಯಿಸಿ ಚಿಕಿತ್ಸೆಯನ್ನು ನೀಡಿಸಿದ್ದರೂ ಹಸುವಿನ ಸ್ಥಿತಿ ಗಂಭೀರವಾಗಿದೆ ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಹಸುವಿನಿಂದ ಜೀವನ ಸಾಗಿಸುತ್ತಿದ್ದ ಬಡ ಮಹಿಳೆಯ ಬದುಕು ಬೀದಿಗೆ ಬಂದಿದೆ.
ಮಾಹಿತಿ ತಿಳಿದ ಕೆ.ಎಂ.ದೊಡ್ಡಿ ಪೊಲೀಸರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿದರು. ಈ ಸಂಬಂಧ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net