ನಿವೃತ್ತ ಶಿಕ್ಷಕನಿಗೆ ಆತ್ಮೀಯ ಬೀಳ್ಕೊಡುಗೆ

ಮಳವಳ್ಳಿ ತಾಲೂಕಿನ ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗುರುವಂನೆ ಮತ್ತು ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ  ನಿವೃತ್ತ ಶಿಕ್ಷಕ ಆರ್.ಜಿ. ಮಹದೇವಸ್ವಾಮಿ ಹಾಗೂ ಪತ್ನಿ ಸುಶೀಲಾ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
ಮಳವಳ್ಳಿ ತಾಲೂಕಿನ ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಗುರುವಂನೆ ಮತ್ತು ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕ ಆರ್.ಜಿ. ಮಹದೇವಸ್ವಾಮಿ ಹಾಗೂ ಪತ್ನಿ ಸುಶೀಲಾ ಅವರನ್ನು ಗ್ರಾಮಸ್ಥರು ಸನ್ಮಾನಿಸಿದರು.
Published on
ಮಳವಳ್ಳಿ: ತಾಲೂಕಿನ ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ, ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಜಿ.ಮಹದೇವಸ್ವಾಮಿ ಅವರಿಗೆ ಗ್ರಾಮಸ್ಥರು ಹಾಗೂ ಹಿರಿಯ ವಿದ್ಯಾರ್ಥಿಗಳು ಭಾನುವಾರ ಆತ್ಮೀಯವಾಗಿ ಬೀಳ್ಕೊಟ್ಟರು.
ನೆಲ್ಲಿಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಂದನೆ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಆರ್.ಜಿ.ಮಹದೇವಸ್ವಾಮಿ, ವ್ಯಕ್ತಿ ಯಾವುದೇ ಉನ್ನತ ಹುದ್ದೆಗಳಲ್ಲಿದ್ದರೂ ನಿವೃತ್ತಿ ನಂತರವೂ ಸ್ಮರಿಸುವುದು ಶಿಕ್ಷಣ ಕಲಿಸಿದ ಗುರುಗಳನ್ನು ಮಾತ್ರ. ಅಂತಹ ಶೈಕ್ಷಣಿಕ ಕ್ಷೇತ್ರದಲ್ಲಿ ನನಗೆ ಸಿಕ್ಕ ಅವಕಾಶಗಳನ್ನು ಬಳಸಿಕೊಂಡು ನಿಷ್ಠೆಯಿಂದ ವಿದ್ಯಾರ್ಥಿಗಳಿಗೆ ಬೋಧನೆ ಮಾಡಿದ ಸಂತೃಪ್ತಿ ಇದೆ ಎಂದರು.
ತಾಲೂಕಿನ ವಿವಿಧ ಶಾಲೆಗಳಲ್ಲಿ ಹಲವು ವರ್ಷಗಳು ಶಿಕ್ಷಕನಾಗಿ ಸೇವೆ ಸಲ್ಲಿಸಿದ್ದು, ನನ್ನ ವೃತ್ತಿಗೆ ಅನುಗುಣವಾಗಿ ಶಿಸ್ತಿನಿಂದ ಬದುಕನ್ನು ಸಾಗಿಸಿದ್ದೇನೆ. ನಮ್ಮ ಅವಧಿಯಲ್ಲಿ ಶಿಕ್ಷಣ ಕಲಿತ ವಿದ್ಯಾರ್ಥಿಗಳು ಪ್ರಸ್ತುತ ಉನ್ನತ ಹುದ್ದೆಗಳು ಸೇರಿದಂತೆ ವಿವಿಧ ಸಮಾಜಮುಖಿ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಹೆಮ್ಮೆ ಎನಿಸುತ್ತದೆ ಎಂದರು.
ಇದಕ್ಕೂ ಮುನ್ನ ವಿದ್ಯಾರ್ಥಿಗಳು ಪೂರ್ಣಕುಂಭ ಸ್ವಾಗತದೊಡನೆ ನಿವೃತ್ತ ಶಿಕ್ಷಕರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಂಡರು. ಗ್ರಾಮಸ್ಥರು ಹಾಗೂ ಹಿರಿಯ ವಿದ್ಯಾರ್ಥಿಗಳು ಆರ್.ಜಿ.ಮಹದೇವಸ್ವಾಮಿ ಮತ್ತು ಅವರ ಪತ್ನಿ ಸುಶೀಲಾ ಅವರನ್ನು ಸನ್ಮಾನಿಸಿ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ ಸೇರಿದಂತೆ ವಿವಿಧ ಶಾಲೆಗಳ ಶಿಕ್ಷಕರು, ಹಲವು ಸಂಘ-ಸಂಸ್ಥೆಗಳ ಮುಖಂಡರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net