ಪಕ್ಷದ ಸಿದ್ಧಾಂತ ಮೆಚ್ಚಿ ಬರುವರಿಗೆ ಸೂಕ್ತ ಸ್ಥಾನಮಾನ

ಮದ್ದೂರು ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಉದಯ್‌ಶಂಕರ್ ಅವರು ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಿದರು. ಚಲುವರಾಜು, ಪಿ.ಸಂದರ್ಶ, ಹರೀಶ್‌ಬಾಬು, ನಗರಕೆರೆ ಸಂದೀಪ್, ಮಧುಸೂದನ್, ಶಿವಣ್ಣ, ನಟರಾಜು ಇದ್ದರು.
ಮದ್ದೂರು ತಾಲೂಕಿನ ಆಲೂರು ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಉದಯ್‌ಶಂಕರ್ ಅವರು ಶಾಸಕ ಕೆ.ಎಂ.ಉದಯ್ ಅವರನ್ನು ಅಭಿನಂದಿಸಿದರು. ಚಲುವರಾಜು, ಪಿ.ಸಂದರ್ಶ, ಹರೀಶ್‌ಬಾಬು, ನಗರಕೆರೆ ಸಂದೀಪ್, ಮಧುಸೂದನ್, ಶಿವಣ್ಣ, ನಟರಾಜು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್ ಭರವಸೆ
ಮದ್ದೂರು: ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ ಹಾಗೂ ಕ್ಷೇತ್ರದಲ್ಲಿ ನಡೆಯುತ್ತಿರುವ ಸರ್ವತೋಮುಖ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಅನ್ಯಪಕ್ಷದ ಮುಖಂಡರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಕ್ಷೇತ್ರದ ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲೂರು, ಬೂದಗುಪ್ಪೆ, ಚುಂಚಗಳ್ಳಿ, ಆಲೂರು ದೊಡ್ಡಿ, ನೀಲಕಂಠನಹಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ನೂರಾರು ಯುವ ಮುಖಂಡರು ಆಲೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್. ಉದಯ್‌ಶಂಕರ್ ಅವರ ನೇತೃತ್ವದಲ್ಲಿ ಜೆಡಿಎಸ್, ಬಿಜೆಪಿ ಪಕ್ಷದ ಮುಖಂಡರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಭಾನುವಾರ ಮಾತನಾಡಿದರು.
ಕ್ಷೇತ್ರದಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ಯುವಪಡೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿರುವುದು ಅಭಿವೃದ್ಧಿ ಮಾಡಲು ಮತ್ತಷ್ಟು ಉತ್ಸಾಹ ನೀಡಿದೆ. ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅತೀ ಹೆಚ್ಚು ಮತ ಕೊಟ್ಟು ನನಗೆ ಆಶೀರ್ವಾದ ಮಾಡಿದ್ದಿರಿ. ನಿಮ್ಮ ನಂಬಿಕೆಗೆ ನಾನು ದ್ರೋಹ ಮಾಡಲ್ಲ. ನಿರೀಕ್ಷೆಗೂ ಮೀರಿ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದರು.
ಗ್ರಾಮಗಳಲ್ಲಿ ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಇದ್ದರೆ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ. ನೀವು ನನಗೆ ಆಶೀರ್ವಾದ ಮಾಡಿರೋದು ಗ್ರಾಮಗಳ ಅಭಿವೃದ್ಧಿ ಮಾಡುವುದಕ್ಕೆ ಅದು ಬಿಟ್ಟು ರಾಜಕೀಯ ಬೆರೆಸಿ ಗುಂಪುಗಾರಿಕೆ ಮಾಡುವ ವ್ಯಕ್ತಿ ನಾನಲ್ಲ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಮೂಲ ಮಂತ್ರ ಎಂದರು.
ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಉದಯ್ ಶಂಕರ್ ಮಾತನಾಡಿ, ಆಲೂರು ಗ್ರಾಪಂ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿ ದೃಷ್ಟಿಯಿಂದ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆಯೇ ಹೊರತು ಯಾವುದೇ ವೈಯಕ್ತಿಕ ಆಮೀಷಕ್ಕೆ ಒಳಗಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿಲ್ಲ ಎಂದರು.
ಮುಖಂಡ ಮಧುಸೂದನ್ ಮಾತನಾಡಿ, ಶಾಸಕ ಕೆ.ಎಂ.ಉದಯ್ ಅವರು ಕೇವಲ ಎರಡೂವರೇ ವರ್ಷಗಳಲ್ಲಿ 1800 ಕೋಟಿ ರೂ.ಗೂ ಹೆಚ್ಚಿನ ಅನುದಾನದಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ. ಹೀಗಾಗಿ ಅವರ ದೂರದೃಷ್ಟಿ, ಅಭಿವೃದ್ಧಿಗಾಗಿ ಅವರ ಕೈ ಬಲ ಪಡಿಸಲು ಆಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೂರಾರು ಜೆಡಿಎಸ್, ಬಿಜೆಪಿ ಪಕ್ಷದ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದೇವೆ ಎಂದು ಹೇಳಿದರು.
ಆಲೂರು ಗ್ರಾಮದ ಶಿವಣ್ಣ, ನಟರಾಜು, ವಿವೇಕ್, ಶಿವಲಿಂಗಣ್ಣ, ಜಗ್ಗಿ, ಉಮೇಶ್, ಅರಕೇಶ್, ಬೀರೇಶ್, ಚುಂಚನಹಳ್ಳಿ ಗ್ರಾಮದ ಮಧು, ಶಿವಣ್ಣ, ಬೂದುಗುಪ್ಪೆ ಗ್ರಾಮದ ನಂದಿ, ಮಹದೇವು, ವಿಜಿ, ರಾಜಣ್ಣ ಸೇರಿದಂತೆ ಹಲವಾರು ಮುಖಂಡರು ಜೆಡಿಎಸ್, ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ  ಸೇರ್ಪಡೆಗೊಂಡರು.
ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಚಲುವರಾಜು, ನಿರ್ದೇಶಕ ಪಿ.ಸಂದರ್ಶ, ಮನ್‌ಮುಲ್ ನಿರ್ದೇಶಕ ಹರೀಶ್‌ಬಾಬು, ಗ್ರಾಪಂ ಮಾಜಿ ಅಧ್ಯಕ್ಷ ಎಸ್.ಉದಯ್‌ಶಂಕರ್, ನಗರಕೆರೆ ಸಂದೀಪ್, ವಕೀಲ ಮಹೇಶ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net